ಇಂದಿನಿಂದ Xiaomi 17 Ultra ಸೇಲ್ ಪ್ರಾರಂಭ! 200MP ಕ್ಯಾಮೆರಾ, ವೇಗದ ಪ್ರೊಸೆಸರ್
ಇಂದಿನಿಂದ (ಮಾರ್ಚ್ 16 ರಂದು) ಶಿಯೋಮಿ 17 ಅಲ್ಟ್ರಾ ಮಾರಾಟ ಶುರು
ಶಿಯೋಮಿಯ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದೆ
ಶಿಯೋಮಿ ಕಂಪನಿಯ ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ
ಜನಪ್ರಿಯ ಶಿಯೋಮಿ ಮೊಬೈಲ್ ಕಂಪನಿಯ ಹೊಸ Xiaomi 17 Ultra ಸ್ಮಾರ್ಟ್‌ಫೋನ್ ಮಾರಾಟ ಇಂದಿನಿಂದ (ಮಾರ್ಚ್ 18 ರಿಂದ) ಪ್ರಾರಂಭ ಆಗಿದೆ. ಅಂದಹಾಗೆ ಈ ಮೊಬೈಲ್ ಹೈ ಎಂಡ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದು 6,000mAh ಬ್ಯಾಟರಿ ಬ್ಯಾಕ್‌ಅಪ್ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 200MP ಕ್ಯಾಮೆರಾ ಸೆನ್ಸಾರ್ ಸೌಲಭ್ಯವನ್ನು ಒಳಗೊಂಡಿದೆ. ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಭಾರತದಲ್ಲಿ Poco X8 Pro 5G ಸ್ಮಾರ್ಟ್‌ಫೋನ್ ಬಿಡುಗಡೆ! ಜಬರ್ದಸ್ತ್ ಫೀಚರ್ಸ್
Xiaomi 17 Ultra ಸ್ಮಾರ್ಟ್‌ಫೋನ್ ಸೇಲ್ ಡಿಟೇಲ್ಸ್
ನೂತನ ಶಿಯೋಮಿ 17 ಅಲ್ಟ್ರಾ ಮೊಬೈಲ್ ಈಗಾಗಲೇ ತನ್ನ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್ 16GB RAM + 512GB ಸ್ಟೋರೇಜ್ ಸಾಮರ್ಥ್ಯದ ಒಂದೇ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದ್ದು ಇದರ ಬೆಲೆ 1,39,999 ರೂಗಳು ಆಗಿದೆ. ಅಂದಹಾಗೆ ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಈ ನೂತನ ಮೊಬೈಲ್ ಅನ್ನು Amazon ಮತ್ತು ಶಿಯೋಮಿ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಸಬಹುದು.

Xiaomi 17 Ultra ಮೊಬೈಲ್ ಫೀಚರ್ಸ್
ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಿಯೋಮಿ 17 ಅಲ್ಟ್ರಾ ಮೊಬೈಲ್ 6.9 ಇಂಚಿನ Xiaomi HyperRGB OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 1,200×2,608 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 3,500 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್ ಆಕ್ಟಾ ಕೋರ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಇದು ಆಂಡ್ರಾಯ್ಡ್ 16 ಆಧಾರಿತ Xiaomi HyperOS 3 ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು ಇದು ಬಳಕೆದಾರರಿಗೆ ಒದ್ದೆಯಾದ ಬೆರಳುಗಳಿಂದ ಮೊಬೈಲ್ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.
ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 200MP ಟೆಲಿಫೋಟೋ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಲೆನ್ಸ್ ಹಾಗೂ ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 90W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಒಳಗೊಂಡಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile