ಜನಪ್ರಿಯ ಶಿಯೋಮಿ ಮೊಬೈಲ್ ಕಂಪನಿಯ ಹೊಸ Xiaomi 17 Ultra ಸ್ಮಾರ್ಟ್‌ಫೋನ್ ಮಾರಾಟ ಇಂದಿನಿಂದ (ಮಾರ್ಚ್ 18 ರಿಂದ) ಪ್ರಾರಂಭ ಆಗಿದೆ. ಅಂದಹಾಗೆ ಈ ಮೊಬೈಲ್ ಹೈ ಎಂಡ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದು 6,000mAh ಬ್ಯಾಟರಿ ಬ್ಯಾಕ್‌ಅಪ್ ಮೂಲಕ ಗಮನ ಸೆಳೆದಿದೆ. ಈ ಮೊಬೈಲ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 200MP ಕ್ಯಾಮೆರಾ ಸೆನ್ಸಾರ್ ಸೌಲಭ್ಯವನ್ನು ಒಳಗೊಂಡಿದೆ. ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ Poco X8 Pro 5G ಸ್ಮಾರ್ಟ್‌ಫೋನ್ ಬಿಡುಗಡೆ! ಜಬರ್ದಸ್ತ್ ಫೀಚರ್ಸ್
ನೂತನ ಶಿಯೋಮಿ 17 ಅಲ್ಟ್ರಾ ಮೊಬೈಲ್ ಈಗಾಗಲೇ ತನ್ನ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್ 16GB RAM + 512GB ಸ್ಟೋರೇಜ್ ಸಾಮರ್ಥ್ಯದ ಒಂದೇ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದ್ದು ಇದರ ಬೆಲೆ 1,39,999 ರೂಗಳು ಆಗಿದೆ. ಅಂದಹಾಗೆ ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಈ ನೂತನ ಮೊಬೈಲ್ ಅನ್ನು Amazon ಮತ್ತು ಶಿಯೋಮಿ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಸಬಹುದು.
ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಿಯೋಮಿ 17 ಅಲ್ಟ್ರಾ ಮೊಬೈಲ್ 6.9 ಇಂಚಿನ Xiaomi HyperRGB OLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 1,200×2,608 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 3,500 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಮೊಬೈಲ್ ಆಕ್ಟಾ ಕೋರ್ Snapdragon 8 Elite Gen 5 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಇದು ಆಂಡ್ರಾಯ್ಡ್ 16 ಆಧಾರಿತ Xiaomi HyperOS 3 ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು ಇದು ಬಳಕೆದಾರರಿಗೆ ಒದ್ದೆಯಾದ ಬೆರಳುಗಳಿಂದ ಮೊಬೈಲ್ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.
ಶಿಯೋಮಿ 17 ಅಲ್ಟ್ರಾ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾವು 200MP ಟೆಲಿಫೋಟೋ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಲೆನ್ಸ್ ಹಾಗೂ ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 90W ವೈರ್ಡ್ ಮತ್ತು 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಒಳಗೊಂಡಿದೆ.