ಜೂನ್ 10 ರಂದು Xiaomi 17T ಮೊಬೈಲ್ ಸೇಲ್ ಪ್ರಾರಂಭ! ತ್ರಿವಳಿ ಕ್ಯಾಮೆರಾ ಸೌಲಭ್ಯ
ಜೂನ್ 10 ರಂದು ಶಿಯೋಮಿ 17T ಫೋನ್ ಮಾರಾಟ ಶುರು
ಶಿಯೋಮಿ 17T ಫೋನ್ 32MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ
ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್ ಪಡೆದಿದೆ
ಜನಪ್ರಿಯ ಶಿಯೋಮಿ ಕಂಪನಿಯು ನೂತನವಾಗಿ ಪರಿಚಯಿಸಿರುವ Xiaomi 17T ಸ್ಮಾರ್ಟ್‌ಫೋನ್ ಈಗಾಗಲೇ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ಮೊಬೈಲ್ ಇದೇ ಜೂನ್ 10 ರಂದು ಮಾರಾಟ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 6,500mAh ಬ್ಯಾಟರಿ ಸಪೋರ್ಟ್ ಜೊತೆಗೆ 67W ಫಾಸ್ಟ್ ಚಾರ್ಜಿಂಗ್ ಪಡೆದಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗೆಯೇ ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೇ ಶಿಯೋಮಿ 17T ಸ್ಮಾರ್ಟ್‌ಫೋನ್ ಸೇಲ್ ಮಾಹಿತಿ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : OnePlus Community Sale: ಈ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್
Xiaomi 17T ಫೋನ್ ಸೇಲ್ ಡಿಟೇಲ್ಸ್
ಇತ್ತೀಚಿಗೆ ಬಿಡುಗಡೆ ಆಗಿರುವ ಶಿಯೋಮಿ 17T ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಇದೇ ಜೂನ್ 10 ರಂದು ಅಮೆಜಾನ್ ಇ ಕಾಮರ್ಸ್ ಮೂಲಕ ಮೊದಲ ಸೇಲ್ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 12GB RAM + 256GB ಸ್ಟೋರೇಜ್ ವೇರಿಯಂಟ್ 59,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 512GB ಸ್ಟೋರೇಜ್ ವೇರಿಯಂಟ್ ಬೆಲೆಯು 64,999 ರೂ.ಗಳು ಆಗಿದೆ. ಇನ್ನು ಈ ಮೊಬೈಲ್ ಬ್ಲ್ಯಾಕ್, ಬ್ಲೂ ಹಾಗೂ ವೈಲೇಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಶಿಯೋಮಿ 17T ಫೀಚರ್ಸ್ ಹೈಲೈಟ್ಸ್
ಶಿಯೋಮಿ 17T ಮೊಬೈಲ್ 6.59 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಥರ್ಮಲ್ ನಿರ್ವಹಣೆಗಾಗಿ ಫೋನ್ ಕಂಪನಿಯ 3D ಐಸ್‌ಲೂಪ್ ಕೂಲಿಂಗ್ ವ್ಯವಸ್ಥೆಯ ಸೌಲಭ್ಯ ಪಡೆದುಕೊಂಡಿದೆ.
ಶಿಯೋಮಿ 17T ಮೊಬೈಲ್ ಲೀಕಾ ಟ್ಯೂನ್ಡ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು OIS ನೊಂದಿಗೆ 50MP ಲೈಟ್ ಫ್ಯೂಷನ್ 800 ಸೆನ್ಸಾರ್ ಆಗಿದೆ. ಸೆಕೆಂಡರಿ ಕ್ಯಾಮೆರಾವು 50MP ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 12MP ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
