ಭಾರತದಲ್ಲಿ Xiaomi 17T ಸ್ಮಾರ್ಟ್‌ಫೋನ್ ಬಿಡುಗಡೆ! ಜಬರ್ದಸ್ತ್ ಕ್ಯಾಮೆರಾ ಸೌಲಭ್ಯ
ಶಿಯೋಮಿ 17T ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ
ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್ ಪಡೆದಿದೆ
ಶಿಯೋಮಿಯ ಈ ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ
ಶಿಯೋಮಿ ಮೊಬೈಲ್ ಕಂಪನಿಯು ಹೊಸದಾಗಿ Xiaomi 17T ಸ್ಮಾರ್ಟ್‌ಫೋನ್ ಅನ್ನು ಇಂದು (ಜೂನ್ 4 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಫ್ಲ್ಯಾಗ್‌ಶಿಪ್ ಮಾದರಿಯಲ್ಲಿ ನೂತನವಾಗಿ ಎಂಟ್ರಿ ಕೊಟ್ಟಿರುವ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 6,500mAh ಬ್ಯಾಟರಿ ಸಪೋರ್ಟ್ ಜೊತೆಗೆ 67W ಫಾಸ್ಟ್ ಚಾರ್ಜಿಂಗ್ ಪಡೆದಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಹಾಗೆಯೇ ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೇ ಶಿಯೋಮಿ 17T ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಲಾಂಚ್ ಆಗಿಯೇ ಬಿಡ್ತು Motorola Edge 70 Pro+ ಸ್ಮಾರ್ಟ್‌ಫೋನ್! ಟ್ರಿಪಲ್ ಕ್ಯಾಮೆರಾ
Xiaomi 17T ಫೋನ್ ಬೆಲೆ ಹಾಗೂ ಲಭ್ಯತೆ
ಶಿಯೋಮಿ ಕಂಪನಿಯ ಶಿಯೋಮಿ 17T ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಮೊಬೈಲ್‌ನ 12GB RAM + 256GB ಸ್ಟೋರೇಜ್ ವೇರಿಯಂಟ್ 59,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 512GB ಸ್ಟೋರೇಜ್ ವೇರಿಯಂಟ್ ಬೆಲೆಯು 64,999 ರೂ.ಗಳು ಆಗಿದೆ. ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ವೈಲೇಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಇದೇ ಜೂನ್ 10 ರಂದು ಅಮೆಜಾನ್ ಇ ಕಾಮರ್ಸ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.

ಶಿಯೋಮಿ 17T ಫೋನ್ ಫೀಚರ್ಸ್ ಹೀಗಿವೆ
ಶಿಯೋಮಿ 17T ಮೊಬೈಲ್ 6.59 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಥರ್ಮಲ್ ನಿರ್ವಹಣೆಗಾಗಿ ಫೋನ್ ಕಂಪನಿಯ 3D ಐಸ್‌ಲೂಪ್ ಕೂಲಿಂಗ್ ವ್ಯವಸ್ಥೆಯ ಸೌಲಭ್ಯ ಪಡೆದುಕೊಂಡಿದೆ.
ಶಿಯೋಮಿ 17T ಮೊಬೈಲ್ ಲೀಕಾ ಟ್ಯೂನ್ಡ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು OIS ನೊಂದಿಗೆ 50MP ಲೈಟ್ ಫ್ಯೂಷನ್ 800 ಸೆನ್ಸಾರ್ ಆಗಿದೆ. ಸೆಕೆಂಡರಿ ಕ್ಯಾಮೆರಾವು 50MP ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 12MP ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
