Xiaomi 17T 5G
ಶಿಯೋಮಿ ಬ್ರಾಂಡ್ ಇದೀಗ ಹೊಸದಾಗಿ Xiaomi 17T ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ನೂತನ ಸ್ಮಾರ್ಟ್‌ಫೋನ್ ಇಂದು (ಜೂನ್ 4 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಕುರಿತಾಗಿ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಪ್ರತ್ಯೇಕ ಮೈಕ್ರೋಪೇಜ್ ಅನ್ನು ಸಹ ತೆರೆಯಲಾಗಿದೆ. ಇನ್ನು ಮುಂಬರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ SoC ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಒಳಗೊಂಡಿರಲಿದೆ ಎನ್ನಲಾಗಿದೆ. ಇದರೊಂದಿಗೆ 6,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇದರೊಂದಿಗೆ ಈ ಮೊಬೈಲ್ ಲೈಕಾ-ಟ್ಯೂನ್ಡ್ ಕ್ಯಾಮೆರಾ ಸಿಸ್ಟಮ್ ರಚನೆ ಹೊಂದಿರಲಿದೆ. ಹಾಗಾದರೆ ಶಿಯೋಮಿ 17T ಮೊಬೈಲ್‌ನ ಹೊಸ ಅಪ್‌ಡೇಟ್ಸ್ ಹಾಗೂ ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಕಡಿಮೆ ಬೆಲೆಯಲ್ಲಿ 28 ದಿನಗಳ ಮಾನ್ಯತೆ ಪಡೆದ Vi ಟೆಲಿಕಾಂನ ರೀಚಾರ್ಜ್ ಯೋಜನೆಗಳ ಮಾಹಿತಿ
ಶಿಯೋಮಿ ಕಂಪನಿಯ ಮುಂಬರುವ ನೂತನ ಶಿಯೋಮಿ 17T ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಅಂದಹಾಗೆ ಈ ಫೋನ್ ಇಂದು (ಜೂನ್ 4 ರಂದು) ಮಧ್ಯಾಹ್ನ 12 ಗಂಟೆಗೆ ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಇನ್ನು ಲಾಂಚ್ ಕುರಿತು ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಇನ್ನು ಈ ಫೋನ್ 12GB RAM + 256GB ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರುವ ನಿರೀಕ್ಷೆಗಳು ಇವೆ ಎನ್ನಲಾಗಿದೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 65,999 ರೂ.ಗಳ ಆಸುಪಾಸಿನಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ.
ಶಿಯೋಮಿ 17T ಮೊಬೈಲ್ 6.59 ಇಂಚಿನ 1.5K AMOLED ಡಿಸ್‌ಪ್ಲೇ ಒಳಗೊಂಡಿರಲಿದ್ದು ಇದರೊಂದಿಗೆ 120Hz ರಿಫ್ರೆಶ್ ದರ, HDR10+, ಡಾಲ್ಬಿ ವಿಷನ್ ಆಯ್ಕೆಗಳನ್ನು ಪಡೆದಿರಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ SoC ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ವೇರಿಯಂಟ್ ಆಯ್ಕೆಗಳನ್ನು ಪಡೆದಿರುವ ಸಾಧ್ಯತೆಗಳು ಇವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 16 ಆಧಾರಿತ ಹೈಪರ್‌ಓಎಸ್ 3 ಅನ್ನು ರನ್ ಮಾಡಬಹುದು.
ಶಿಯೋಮಿ 17T ಮೊಬೈಲ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರಲಿದ್ದು, ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಪಡೆದಿರಲಿದೆ. ಹಾಗೆಯೇ ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 12MP ಅಲ್ಟ್ರಾ ವೈಡ್ ಲೆನ್ಸ್ ಹಾಗೂ 50MP ಪೆರಿಸ್ಕೋಪ್ ಟೆಲಿಫೋಟೋ ಸೆನ್ಸಾರ್‌ನಲ್ಲಿ ಇರಬಹುದು ಎನ್ನಲಾಗಿದೆ. ಇನ್ನು ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಸೆನ್ಸಾರ್‌ನ ಕ್ಯಾಮೆರಾ ಹೊಂದಿರಬಹುದು ಎನ್ನಲಾಗಿದೆ. ಅಲ್ಲದೇ 6,500mAh ಬ್ಯಾಟರಿ ಬ್ಯಾಕ್‌ಅಪ್ ಇರಲಿದ್ದು, ಇದಕ್ಕೆ ಅನುಗುಣವಾಗಿ 67W ವೈರ್ಡ್ ಫಾಸ್ಟ್ ಚಾರ್ಜಿಂಗ್ ನೀಡಬಹುದು.