ಪ್ರೀಮಿಯಂ ಫೀಚರ್ಸ್‌ ಇರುವ Xiaomi 17T ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ!

HIGHLIGHTS

ಶಿಯೋಮಿ 17T ಫೋನ್‌ ಈಗ ಆಫರ್‌ನಲ್ಲಿ ಲಭ್ಯ

ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ ಹೊಂದಿದೆ

ಶಿಯೋಮಿ ಕಂಪನಿಯ Xiaomi 17T ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಬ್ಲ್ಯಾಕ್‌, ಬ್ಲೂ ಹಾಗೂ ವೈಲೇಟ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಶಿಯೋಮಿ 17T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಲಾಂಚ್‌ ಆಗಿದೆ ಬಹುನಿರೀಕ್ಷಿತ Vivo T5 Lite 5G ಮೊಬೈಲ್‌! 44W ಫಾಸ್ಟ್ ಚಾರ್ಜಿಂಗ್

Xiaomi 17T ಫೋನ್‌ ಡಿಸ್ಕೌಂಟ್‌ನಲ್ಲಿ ಲಭ್ಯ

ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಶಿಯೋಮಿ 17T ಸ್ಮಾರ್ಟ್‌ಫೋನ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 84,990 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಬ್ಲ್ಯಾಕ್‌, ಬ್ಲೂ ಹಾಗೂ ವೈಲೇಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

ಶಿಯೋಮಿ 17T ಫೋನ್‌ ಫೀಚರ್ಸ್‌ ಹೀಗಿವೆ

ಶಿಯೋಮಿ 17T ಮೊಬೈಲ್‌ 6.59 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB + 512GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಥರ್ಮಲ್ ನಿರ್ವಹಣೆಗಾಗಿ ಫೋನ್ ಕಂಪನಿಯ 3D ಐಸ್‌ಲೂಪ್ ಕೂಲಿಂಗ್ ವ್ಯವಸ್ಥೆಯ ಸೌಲಭ್ಯ ಪಡೆದುಕೊಂಡಿದೆ.

ಶಿಯೋಮಿ 17T ಮೊಬೈಲ್‌ ಲೀಕಾ ಟ್ಯೂನ್ಡ್ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು OIS ನೊಂದಿಗೆ 50MP ಲೈಟ್ ಫ್ಯೂಷನ್ 800 ಸೆನ್ಸಾರ್‌ ಆಗಿದೆ. ಸೆಕೆಂಡರಿ ಕ್ಯಾಮೆರಾವು 50MP ಸೆನ್ಸಾರ್‌ ಹಾಗೂ ತೃತೀಯ ಕ್ಯಾಮೆರಾ 12MP ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 6,500mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :