Jio ಗ್ರಾಹಕರೇ ನಿಮಗೆ ಪ್ರತಿದಿನ 2GB ಡೇಟಾ ಅಗತ್ಯ ಇದ್ದರೇ, ಈ ಯೋಜನೆಗಳನ್ನು ಗಮನಿಸಿ!
ಜಿಯೋ ಸಂಸ್ಥೆಯ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ
ಜಿಯೋ ಕಂಪನಿಯ 450 ರೂ.ಗಳ ಪ್ಲಾನ್‌ನಲ್ಲಿ 36 ದಿನಗಳ ವ್ಯಾಲಿಡಿಟಿ
ಜಿಯೋ ಟೆಲಿಕಾಂನ ಈ ಯೋಜನೆಯಲ್ಲಿ ಓಟಿಟಿ ಸೌಲಭ್ಯ ದೊರೆಯುತ್ತದೆ
Jio ಟೆಲಿಕಾಂ ಕಂಪನಿಯು ಹಲವು ಆಕರ್ಷಕ ರೀಚಾರ್ಜ್ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಭಿನ್ನ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಟೆಲಿಕಾಂ ಬೆಸ್ಟ್ ಡೇಟಾ, ಓಟಿಟಿ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ಜಿಯೋ ಸಂಸ್ಥೆಯ ಯೋಜನೆಗಳ ಪಟ್ಟಿಯಲ್ಲಿ ಕಡಿಮೆ ಬೆಲೆಯಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಗ್ರಾಹಕಸ್ನೇಹಿ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಹೆಚ್ಚು ಬೇಡಿಕೆ ಹೊಂದಿವೆ. ಆ ಪೈಕಿ ಜಿಯೋ ಟೆಲಿಕಾಂನ 450 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಬೆಲೆಯಲ್ಲಿ ಆಕರ್ಷಕ ಎನಿಸಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 36 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 450 ರೂ.ಗಳ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : ನಾಳೆ Redmi Turbo 5 ಸ್ಮಾರ್ಟ್‌ಫೋನ್ ಲಾಂಚ್! 100W ವೇಗದ ಚಾರ್ಜಿಂಗ್ ನಿರೀಕ್ಷೆ
Jio ಕಂಪನಿಯ 450 ರೂ.ಗಳ ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ 450 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 36 ದಿನಗಳ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಇದರೊಟ್ಟಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ. ಅಲ್ಲದೇ ಜಿಯೋ ಟಿವಿ, ಜಿಯೋ ಎಐ ಕ್ಲೌಡ್ ಚಂದಾದಾರಿಕೆ ಸಿಗಲಿದೆ.

ಇತರೆ 2GB ಡೇಟಾ ಯೋಜನೆಗಳ ಮಾಹಿತಿ
ಜಿಯೋ ಟೆಲಿಕಾಂನ 629 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋ ಟಿವಿ, ಜಿಯೋ ಎಐ ಕ್ಲೌಡ್ ಚಂದಾದಾರಿಕೆ ಸಿಗಲಿದೆ.
ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ನಿತ್ಯ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಖಚಿತ. ಅಲ್ಲದೇ ಜಿಯೋ ಟಿವಿ, ಜಿಯೋ ಎಐ ಕ್ಲೌಡ್ ಚಂದಾದಾರಿಕೆ ಸಿಗಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
