Airtel ಟೆಲಿಕಾಂನ ಈ ಪ್ಲಾನ್‌ಗಳು ಡೇಟಾ ಜೊತೆಗೆ 30 ದಿನಗಳ ವ್ಯಾಲಿಡಿಟಿ ನೀಡುತ್ತವೆ
ಏರ್‌ಟೆಲ್ ಕಂಪನಿಯ ಈ ಪ್ಲಾನ್‌ಗಳಲ್ಲಿ 30 ದಿನಗಳ ವ್ಯಾಲಿಡಿಟಿ ಸೌಲಭ್ಯ
ಏರ್‌ಟೆಲ್ ಸಂಸ್ಥೆಯ ಈ ಯೋಜನೆಗಳು ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಹೊಂದಿವೆ
ಏರ್‌ಟೆಲ್‌ನ ಈ ಪ್ಲಾನ್‌ಗಳಲ್ಲಿ Adobe Express Premium ಚಂದಾದಾರಿಕೆ ದೊರೆಯುತ್ತದೆ
ಜನಪ್ರಿಯ Airtel ಟೆಲಿಕಾಂ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ದೈನಂದಿನ ಡೇಟಾ ಸೌಲಭ್ಯ ನೀಡುವ ಪ್ಲಾನ್‌ಗಳು ಇವೆ. ಅಲ್ಲದೇ ನಿಗದಿತ ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ಬಿಗ್ ವ್ಯಾಲಿಡಿಟಿ ಸೌಲಭ್ಯ ಒಳಗೊಂಡ ರೀಚಾರ್ಜ್ ಯೋಜನೆಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ಹಾಗೆಯೇ ಏರ್‌ಟೆಲ್ ಕಂಪನಿಯು ಸರಿಯಾಗಿ 30 ದಿನಗಳ ವ್ಯಾಲಿಡಿಟಿ ಒದಗಿಸುವ ಯೋಜನೆಗಳ ಆಯ್ಕೆ ಸಹ ನೀಡಿದೆ. ಪೂರ್ಣ ತಿಂಗಳ ಮಾನ್ಯತೆಯ ಯೋಜನೆಗಳು ಆಕರ್ಷಕ ಡೇಟಾ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಒಳಗೊಂಡಿವೆ. ಹಾಗಾದರೆ 30 ದಿನಗಳ ವ್ಯಾಲಿಡಿಟಿ ಒಳಗೊಂಡ ಏರ್‌ಟೆಲ್‌ನ ಕೆಲವು ಯೋಜನೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ.
SurveyAlso Read : 50MP ಸೆಲ್ಫಿ ಕ್ಯಾಮೆರಾ ಇರುವ Vivo V60e ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
Airtel ಸಂಸ್ಥೆಯ 355 ರೂಗಳ ಪ್ಲಾನ್ ಮಾಹಿತಿ
ಏರ್‌ಟೆಲ್ ಟೆಲಿಕಾಂನ 355 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 25GB Data ಸೌಲಭ್ಯ ಸಿಗಲಿದೆ. ಅಂದಹಾಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ Adobe Express Premium ಚಂದಾದಾರಿಕೆ ಹಾಗೂ ಉಚಿತ ಹೆಲೋ ಟ್ಯೂನ್ ಸೌಲಭ್ಯ ಲಭ್ಯ.

ಏರ್‌ಟೆಲ್ ಸಂಸ್ಥೆಯ 589 ರೂಗಳ ಪ್ಲಾನ್ ಮಾಹಿತಿ
ಏರ್‌ಟೆಲ್ ಟೆಲಿಕಾಂನ 589 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪೂರ್ಣ ತಿಂಗಳಿಗೆ ಒಟ್ಟು 50GB Data ಸೌಲಭ್ಯ ಸಿಗಲಿದೆ. ಅಂದಹಾಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ Adobe Express Premium ಚಂದಾದಾರಿಕೆ ಹಾಗೂ ಉಚಿತ ಹೆಲೋ ಟ್ಯೂನ್ ಸೌಲಭ್ಯ ಲಭ್ಯ.
ಏರ್‌ಟೆಲ್ ಕಂಪನಿಯ 319 ರೂಗಳ ಪ್ಲಾನ್ ಮಾಹಿತಿ
ಏರ್‌ಟೆಲ್ ಸಂಸ್ಥೆಯ 319 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ನಿತ್ಯ 1.5 GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಆಪಲ್ ಮ್ಯೂಸಿಕ್ ಹಾಗೂ Adobe Express Premium ಚಂದಾದಾರಿಕೆ ಲಭ್ಯ.
ಏರ್‌ಟೆಲ್ ಸಂಸ್ಥೆಯ 609 ರೂಗಳ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 609 ರೂಗಳ ರೀಚಾರ್ಜ್ ಯೋಜನೆಯಲ್ಲಿ ಸಹ ಬಳಕೆದಾರರಿಗೆ ಪೂರ್ಣ ತಿಂಗಳಿಗೆ ಒಟ್ಟು 60GB Data ಸೌಲಭ್ಯ ಸಿಗಲಿದೆ. ಅಂದಹಾಗೆ ಏರ್‌ಟೆಲ್‌ನ ಈ ಪ್ಲಾನ್ 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಹಾಗೆಯೇ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 300 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಪ್ಲಾನಿನಲ್ಲಿ Adobe Express Premium ಚಂದಾದಾರಿಕೆ ಹಾಗೂ ಉಚಿತ ಹೆಲೋ ಟ್ಯೂನ್ ಸೌಲಭ್ಯ ಲಭ್ಯ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile