ಜನಪ್ರಿಯ Airtel ಭಿನ್ನ ರೀಚಾರ್ಜ್ ಯೋಜನೆಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ Airtel ಕಂಪನಿಯ ಯೋಜನೆಗಳ ಲಿಸ್ಟ್‌ನಲ್ಲಿ ಅಗ್ಗದ ಪ್ಲಾನ್‌ಗಳು ಹಾಗೂ ದುಬಾರಿ ದರದ ಯೋಜನೆಗಳು ಸೇರಿವೆ. ಅದಾಗ್ಯೂ, ಹೆಚ್ಚಿನ ಡೇಟಾ ಪ್ರಯೋಜನ ಹಾಗೂ ಬಿಗ್ ವ್ಯಾಲಿಡಿಟಿ ಒಳಗೊಂಡ ಹೈ ಎಂಡ್ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಇವು ದೈನಂದಿನ ಅಧಿಕ ಡೇಟಾ ಪ್ರಯೋಜನ ಬಯಸುವ ಬಳಕೆದಾರರಿಗೆ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯ ಬಯಸುವ ಗ್ರಾಹಕರಿಗೆ ಸೂಕ್ತ ಎನಿಸಿವೆ. ಅಂದಹಾಗೆ ಈ ಯೋಜನೆಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಕೂಡಾ ಸಿಗುತ್ತವೆ. ಹಾಗಾದರೆ Airtel ಟೆಲಿಕಾಂನ ದುಬಾರಿ ದರದ ರೀಚಾರ್ಜ್ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola Edge 60 Fusion 5G ಬೆಲೆಯಲ್ಲಿ ಭರ್ಜರಿ ಕುಸಿತ! ಈ ಆಫರ್ ಮಿಸ್ ಮಾಡ್ಕೋಬೇಡಿ
Airtel ಕಂಪನಿಯ 3599 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ + ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಅಲ್ಲದೇ Adobe premiere express ಚಂದಾದಾರಿಕೆಯ ಪ್ರಯೋಜನ ಸಿಗಲಿದೆ.
Airtel ಕಂಪನಿಯ 3999 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2.5 GB Data ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರೀಪೇಯ್ಡ್ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆಯ ಜೊತೆಗೆ Adobe premiere express ಚಂದಾದಾರಿಕೆಯ ಪ್ರಯೋಜನ ಸಿಗಲಿದೆ.
Airtel ಸಂಸ್ಥೆಯ 2249 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 30GB ಡೇಟಾ ಪ್ರಯೋಜನ ಸಿಗಲಿದೆ. ಅಂದಹಾಗೆ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಉಳಿದಂತೆ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ Adobe premiere express ಚಂದಾದಾರಿಕೆಯ ಪ್ರಯೋಜನ ಸಿಗಲಿದೆ.