Airtel ಕಂಪನಿಯ ಈ ಪ್ಲಾನ್‌ ರೀಚಾರ್ಜ್‌ ಮಾಡಿದ್ರೆ, ಅಮೆಜಾನ್‌ ಪ್ರೈಮ್‌ ಜೊತೆಗೆ ಭರ್ಜರಿ ಡೇಟಾ ಸಿಗುತ್ತೆ

Airtel ಕಂಪನಿಯ ಈ ಪ್ಲಾನ್‌ ರೀಚಾರ್ಜ್‌ ಮಾಡಿದ್ರೆ, ಅಮೆಜಾನ್‌ ಪ್ರೈಮ್‌ ಜೊತೆಗೆ ಭರ್ಜರಿ ಡೇಟಾ ಸಿಗುತ್ತೆ

ದೇಶದ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆ ಎಂದೇ ಬಿಂಬಿತವಾಗಿರುವ ಭಾರ್ತಿ Airtel ಈಗಾಗಲೇ ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಕೆಲವು ಆಕರ್ಷಕ ಯೋಜನೆಗಳ ಮೂಲಕ ಜಿಯೋ ಹಾಗೂ ವಿ ಸಂಸ್ಥೆಗಳಿಗೆ ನೇರ ಟಾಂಗ್ ನೀಡಿದೆ. ಅವುಗಳ ಪೈಕಿ ಏರ್‌ಟೆಲ್‌ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಕೆಲವು ಪ್ಲಾನ್‌ಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಹೈಲೈಟ್‌ ಆಗಿದೆ. ಆ ಪೈಕಿ ಸಂಸ್ಥೆಯ 1199 ರೂ. ಯೋಜನೆ ಉತ್ತಮ ಎನಿಸಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 1199 ರೂ.ಗಳ ಪ್ಲಾನಿನ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 256GB ಸ್ಟೋರೇಜ್ ಇರುವ Google Pixel 10a ಮೊಬೈಲ್‌ ಬೆಲೆಯಲ್ಲಿ ಗಮನಾರ್ಹ ಇಳಿಕೆ!

Airtel ಟೆಲಿಕಾಂನ 1199 ರೂ.ಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಕಂಪನಿಯ 1199 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಯ ಪ್ರಯೋಜನ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಅಮೆಜಾನ್‌ ಪ್ರೈಮ್‌ ಲೈಟ್‌ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.

airtel 84 days recharge plan offer 5g unlimited data Calling and OTT benefits
airtel recharge plan

ಏರ್‌ಟೆಲ್‌ ಟೆಲಿಕಾಂನ 1798 ರೂ.ಗಳ ಯೋಜನೆ ಮಾಹಿತಿ

ಏರ್‌ಟೆಲ್‌ ಕಂಪನಿಯ 1798 ರೂ.ಗಳ ಪ್ರೀಪೇಯ್ಡ್‌ ಯೋಜನೆಯಲ್ಲಿ ಸಹ ಗ್ರಾಹಕರಿಗೆ ದೈನಂದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ನೆಟ್‌ಫ್ಲಿಕ್ಸ್‌ ಬೇಸಿಕ್ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ ಟೆಲಿಕಾಂನ 838 ರೂ.ಗಳ ಪ್ಲಾನ್ ಮಾಹಿತಿ

ಏರ್‌ಟೆಲ್‌ ಕಂಪನಿಯ 838 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಯ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಅಮೆಜಾನ್‌ ಪ್ರೈಮ್‌, ಸೋನಿ ಲೈವ್‌ ಸೇರಿದಂತೆ ಕೆಲವು ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಸೌಲಭ್ಯ ಸಹ ದೊರೆಯುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile