airtel
ದೇಶದ ಎರಡನೇ ದೊಡ್ಡ ಟೆಲಿಕಾಂ ಎನಿಸಿರುವ Airtel ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ವಿ ಸಂಸ್ಥೆಗಳಿಗೆ ನೇರ ಟಾಂಗ್ ನೀಡುತ್ತಾ ಸಾಗಿದೆ. ಆ ಪೈಕಿ ಏರ್‌ಟೆಲ್ ಕಂಪನಿಯ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಸಂಸ್ಥೆಯ 1798 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 1798 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ವಾಟ್ಸಾಪ್ Username ಫೀಚರ್‌ಗೆ ಕೇಂದ್ರ ಸರ್ಕಾರ ಬ್ರೇಕ್! Meta ಸಂಸ್ಥೆಗೆ ನೋಟಿಸ್ ಜಾರಿ
ಏರ್‌ಟೆಲ್ ಟೆಲಿಕಾಂನ 1798 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Netflix ಬೇಸಿಕ್ ಓಟಿಟಿ ಚಂದಾದಾರಿಕೆ ಲಭ್ಯ.
ಏರ್‌ಟೆಲ್ ಟೆಲಿಕಾಂನ 1029 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್‌ಸ್ಟಾರ್ ಓಟಿಟಿ ಚಂದಾದಾರಿಕೆ ಲಭ್ಯ.
ಏರ್‌ಟೆಲ್ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಸೋನಿ ಲೈವ್ ಸೇರಿ ಇತರೆ ಓಟಿಟಿ ಚಂದಾದಾರಿಕೆ ಲಭ್ಯ.