Airtel ಸಂಸ್ಥೆಯ 219ರೂ.ಗಳ ಪ್ಲಾನಿನಲ್ಲಿ 3GB ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ

HIGHLIGHTS

ಏರ್‌ಟೆಲ್‌ನ ಈ ಅಗ್ಗದ ಪ್ಲಾನಿನಲ್ಲಿ 3GB ಡೇಟಾ ಲಭ್ಯ

ಏರ್‌ಟೆಲ್‌ ಟೆಲಿಕಾಂನ 219 ರೂ.ಗಳ ಪ್ಲಾನ್‌ನಲ್ಲಿ 28 ದಿನಗಳ ವ್ಯಾಲಿಡಿಟಿ

ಏರ್‌ಟೆಲ್‌ನ ಈ ಪ್ಲಾನಿನಲ್ಲಿ ಬಳಕೆದಾರರಿಗೆ 300 SMS ದೊರೆಯುತ್ತದೆ

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗಮನ ಸೆಳೆದ Airtel ಕಂಪನಿಯು ಜಿಯೋ ಹಾಗೂ ವಿ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಏರ್‌ಟೆಲ್‌ ಟೆಲಿಕಾಂ ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯ ರೀಚಾರ್ಜ್‌ ಯೋಜನೆಗಳ ಲಿಸ್ಟ್‌ ಒಳಗೊಂಡಿದೆ. ಏರ್‌ಟೆಲ್‌ನ ಯೋಜನೆಗಳ ಪಟ್ಟಿಯಲ್ಲಿ ಅಗ್ಗದ ಬೆಲೆಯಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ನಿಗದಿತ ಡೇಟಾ ಪ್ರಯೋಜನ ಹೊಂದಿರುವ ಪ್ರೀಪೇಯ್ಡ್‌ ಪ್ಲಾನ್‌ಗಳು ಬೇಡಿಕೆಯಲ್ಲಿ ಇವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 219 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಅಗ್ಗದ ದರದ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಗ್ಗದ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 28 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 219 ರೂ.ಗಳ ಪ್ಲಾನ್‌ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : ಇಂದಿನಿಂದ Poco C81 ಮತ್ತು Poco C81x ಖರೀದಿಗೆ ಲಭ್ಯ! ಕಡಿಮೆ ಬೆಲೆಗೆ ಲಭ್ಯ

Airtel ಟೆಲಿಕಾಂನ 219 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 219 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಒಟ್ಟು 300 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 355 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಒಟ್ಟು 300 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 609 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 60GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಒಟ್ಟು 300 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 589 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 50GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಒಟ್ಟು 300 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :