Airtel 365 Days Validity
ಜನಪ್ರಿಯ Airtel ಟೆಲಿಕಾಂ ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ದೀರ್ಘ ವ್ಯಾಲಿಡಿಟಿ ಯೋಜನೆಗಳ ಮೂಲಕ ಜಿಯೋ ಹಾಗೂ ವಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಫೈಟ್ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 2249 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 2249 ರೂ.ಗಳ ಪ್ಲಾನಿನ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola Edge 70 Max ಮೊಬೈಲ್ ಲಾಂಚ್‌ಗೆ ಡೇಟ್ ಫಿಕ್ಸ್! ಪ್ರೀಮಿಯಂ ಲುಕ್‌ನಲ್ಲಿ ಬರಲಿದೆ
ಏರ್‌ಟೆಲ್ ಟೆಲಿಕಾಂನ 2249 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಒಟ್ಟು 30GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 3600 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ಏರ್‌ಟೆಲ್ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೌಲಭ್ಯದೊಂದಿಗೆ ವಾರ್ಷಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಅತ್ಯುತ್ತಮ ಎನಿಸುತ್ತದೆ.
ಏರ್‌ಟೆಲ್ ಟೆಲಿಕಾಂನ 3999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೌಲಭ್ಯದೊಂದಿಗೆ ವಾರ್ಷಿಕ ವ್ಯಾಲಿಡಿಟಿ ಅಗತ್ಯ ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.