Airtel ಗ್ರಾಹಕರೇ ನಿಮಗೆ 365 ದಿನಗಳ ವ್ಯಾಲಿಡಿಟಿ ಬೇಕಿದ್ದರೆ ಈ ಪ್ಲಾನ್ ಉತ್ತಮ ಆಯ್ಕೆ
ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಪ್ರತಿದಿನ ಅನಿಯಮಿತ ಡೇಟಾ ಸೌಲಭ್ಯ
ಏರ್‌ಟೆಲ್ ಕಂಪನಿಯ 3,599 ರೂ.ಗಳ ಪ್ಲಾನ್‌ನಲ್ಲಿ 365 ದಿನಗಳ ವ್ಯಾಲಿಡಿಟಿ
ಏರ್‌ಟೆಲ್ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 SMS ದೊರೆಯುತ್ತದೆ
Airtel ಟೆಲಿಕಾಂ ಸಂಸ್ಥೆ ದೇಶೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ವಿ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಏರ್‌ಟೆಲ್ ಟೆಲಿಕಾಂ ಬಳಕೆದಾರರನ್ನು ಆಕರ್ಷಿಸಿಲಿ ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ಏರ್‌ಟೆಲ್ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಡಿಮ್ಯಾಂಡ್‌ನಲ್ಲಿವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ 3,599 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ವಾರ್ಷಿಕ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 365 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 3,599 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vivo X200T ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ! ಈ ಚಾನ್ಸ್ ಕಳ್ಕೋಬೇಡಿ
Airtel ಟೆಲಿಕಾಂನ 3,599 ರೂ.ಗಳ ಪ್ಲಾನ್ ಪ್ರಯೋಜನಗಳು
ಭಾರ್ತಿ ಏರ್‌ಟೆಲ್ ಟೆಲಿಕಾಂನ 3,599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ಡೇಟಾ (ಪ್ರತಿದಿನ 2.5GB ಡೇಟಾ) ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ನ ಇತರೆ ಪ್ಲಾನ್‌ಗಳ ಮಾಹಿತಿ
ಭಾರ್ತಿ ಏರ್‌ಟೆಲ್ ಟೆಲಿಕಾಂನ 3,999 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ಡೇಟಾ (ಪ್ರತಿದಿನ 2.5GB ಡೇಟಾ) ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಅಲ್ಲದೇ ಜಿಯೋಹಾಟ್ ಸ್ಟಾರ್ ಚಂದಾದಾರಿಕೆಯ ಸೌಲಭ್ಯ ಸಹ ಪಡೆದಿದೆ.
ಭಾರ್ತಿ ಏರ್‌ಟೆಲ್ ಟೆಲಿಕಾಂನ 2,249 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಒಟ್ಟು 30GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.
ಭಾರ್ತಿ ಏರ್‌ಟೆಲ್ ಟೆಲಿಕಾಂನ 1,849 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗುತ್ತದೆ. ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಡೇಟಾ ಪ್ರಯೋಜನ ಅಲಭ್ಯ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹಾಗೆಯೇ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಲಭ್ಯ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile