Airtel ಸಂಸ್ಥೆಯ ಈ ಪ್ಲಾನಿನಲ್ಲಿ 60 ದಿನಗಳ ವ್ಯಾಲಿಡಿಟಿ ಜೊತೆಗೆ ಪ್ರತಿದಿನ 1.5GB ಡೇಟಾ! ಬೆಲೆ ಎಷ್ಟು

HIGHLIGHTS

ಏರ್‌ಟೆಲ್‌ನ ಈ ಬಜೆಟ್ ಪ್ಲಾನಿನಲ್ಲಿ ನಿತ್ಯ 1.5GB ಡೇಟಾ ಲಭ್ಯ

ಏರ್‌ಟೆಲ್‌ ಟೆಲಿಕಾಂನ 619 ರೂ.ಗಳ ಪ್ಲಾನ್‌ನಲ್ಲಿ 60 ದಿನಗಳ ವ್ಯಾಲಿಡಿಟಿ

ಈ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 100 SMS ದೊರೆಯುತ್ತದೆ

Airtel ಸಂಸ್ಥೆಯ ಈ ಪ್ಲಾನಿನಲ್ಲಿ 60 ದಿನಗಳ ವ್ಯಾಲಿಡಿಟಿ ಜೊತೆಗೆ ಪ್ರತಿದಿನ 1.5GB ಡೇಟಾ! ಬೆಲೆ ಎಷ್ಟು

ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಸಂಸ್ಥೆ ಎನಿಸಿರುವ Airtel ಕಂಪನಿಯು ಜಿಯೋ ಹಾಗೂ ವಿ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಏರ್‌ಟೆಲ್‌ ಕಂಪನಿಯು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯ ರೀಚಾರ್ಜ್‌ ಯೋಜನೆಗಳ ಲಿಸ್ಟ್‌ ಹೊಂದಿದೆ. ಏರ್‌ಟೆಲ್‌ನ ಯೋಜನೆಗಳ ಪಟ್ಟಿಯಲ್ಲಿ ಬಜೆಟ್‌ ಬೆಲೆಯಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ನಿಗದಿತ ಡೇಟಾ ಪ್ರಯೋಜನ ಹೊಂದಿರುವ ಪ್ರೀಪೇಯ್ಡ್‌ ಪ್ಲಾನ್‌ಗಳು ಡಿಮ್ಯಾಂಡ್‌ನಲ್ಲಿ ಇವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 619 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಅಗ್ಗದ ದರದ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಗ್ಗದ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 60 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 619 ರೂ.ಗಳ ಪ್ಲಾನ್‌ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : OnePlus Nord CE 6 ಬಿಡುಗಡೆಗೆ ದಿನಾಂಕ ಫಿಕ್ಸ್‌! 8,000mAh ಬ್ಯಾಟರಿ ಪಕ್ಕಾ

Airtel ಟೆಲಿಕಾಂನ 619 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 619 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 60 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

Airtel

ಇತರೆ ಆಕರ್ಷಕ ಯೋಜನೆಗಳ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 929 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅದಲ್ಲದೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅದಲ್ಲದೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo