ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಸಂಸ್ಥೆ ಎನಿಸಿರುವ Airtel ಕಂಪನಿಯು ಜಿಯೋ ಹಾಗೂ ವಿ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಏರ್‌ಟೆಲ್ ಕಂಪನಿಯು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಹೊಂದಿದೆ. ಏರ್‌ಟೆಲ್‌ನ ಯೋಜನೆಗಳ ಪಟ್ಟಿಯಲ್ಲಿ ಬಜೆಟ್ ಬೆಲೆಯಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ನಿಗದಿತ ಡೇಟಾ ಪ್ರಯೋಜನ ಹೊಂದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಡಿಮ್ಯಾಂಡ್‌ನಲ್ಲಿ ಇವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ 619 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಅಗ್ಗದ ದರದ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಗ್ಗದ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 60 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 619 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : OnePlus Nord CE 6 ಬಿಡುಗಡೆಗೆ ದಿನಾಂಕ ಫಿಕ್ಸ್! 8,000mAh ಬ್ಯಾಟರಿ ಪಕ್ಕಾ
ಏರ್‌ಟೆಲ್ ಟೆಲಿಕಾಂನ 619 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 60 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.
ಏರ್‌ಟೆಲ್ ಟೆಲಿಕಾಂನ 929 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅದಲ್ಲದೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.
ಏರ್‌ಟೆಲ್ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅದಲ್ಲದೇ ಅಡೋಬ್ ಪ್ರೀಮಿಯರ್ ಎಕ್ಸ್‌ಪ್ರೆಸ್ ಚಂದಾದಾರಿಕೆ ಸಹ ಬಳಕೆದಾರರಿಗೆ ಲಭ್ಯ.
ಏರ್‌ಟೆಲ್ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.