Airtel ಟೆಲಿಕಾಂನ 838 ರೂ.ಗಳ ಯೋಜನೆಯಲ್ಲಿ 3GB ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ

HIGHLIGHTS

ಏರ್‌ಟೆಲ್‌ನ 838 ರೂ.ಗಳ ಯೋಜನೆ ಬಜೆಟ್‌ ದರದಲ್ಲಿ ಆಕರ್ಷಕ ಎನಿಸಿದೆ

ಏರ್‌ಟೆಲ್‌ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಯಲ್ಲಿ 56 ದಿನಗಳ ವ್ಯಾಲಿಡಿಟಿ ಲಭ್ಯ

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನಿನಲ್ಲಿ ಅನಿಯಮಿತ ಉಚಿತ ವಾಯ್ಸ್‌ ಕರೆ ಸೌಲಭ್ಯ

Airtel ಟೆಲಿಕಾಂನ 838 ರೂ.ಗಳ ಯೋಜನೆಯಲ್ಲಿ 3GB ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ

ದೇಶದ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ Airtel ಕಂಪನಿಯು ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಕೆಲವು ಆಕರ್ಷಕ ಯೋಜನೆಗಳ ಮೂಲಕ ಜಿಯೋ ಹಾಗೂ ವಿ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡಿದೆ. ಅವುಗಳ ಪೈಕಿ ಏರ್‌ಟೆಲ್‌ ಕಂಪನಿಯ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಪ್ರತಿದಿನ ಹೆಚ್ಚಿನ ಡೇಟಾ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಈ ಪ್ಲಾನ್‌ಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಕೂಡಾ ಸಿಗುತ್ತವೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ ಪ್ರತಿದಿನ 3GB ಡೇಟಾ ಪ್ರಯೋಜನ ಒದಗಿಸುವ ರೀಚಾರ್ಜ್‌ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Google Pixel 11 vs iPhone 17: ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಲ್ಲಿ ಖರೀದಿಗೆ ಯಾವುದು ಉತ್ತಮ?

Airtel ಟೆಲಿಕಾಂನ 838 ರೂ.ಗಳ ಯೋಜನೆ

ಭಾರ್ತಿ ಏರ್‌ಟೆಲ್‌ ಕಂಪನಿಯ 838 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಅಮೆಜಾನ್‌ ಪ್ರೈಮ್‌, ಸೋನಿ ಲೈವ್‌ ಸೇರಿದಂತೆ ಕೆಲವು ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಒಂದು ವರ್ಷದ Adobe Premiere Express ಚಂದಾದಾರಿಕೆ ಸಹ ಲಭ್ಯ.

Airtel rs 838 plan OTT
Ai image

ಏರ್‌ಟೆಲ್‌ ಕಂಪನಿಯ 449 ರೂ.ಗಳ ಯೋಜನೆ

ಭಾರ್ತಿ ಏರ್‌ಟೆಲ್‌ ಸಂಸ್ಥೆಯ 449 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಗ್ರಾಹಕರಿಗೆ ಅನ್‌ಮಿಟೆಡ್‌ ಡೇಟಾ + 4GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೇ ಒಂದು ವರ್ಷದ Adobe Premiere Express ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 1798 ರೂ.ಗಳ ಪ್ಲಾನ್ ಮಾಹಿತಿ

ಭಾರ್ತಿ ಏರ್‌ಟೆಲ್‌ ಸಂಸ್ಥೆಯ 1798 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 3GB Data ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ನೆಟ್‌ಫ್ಲಿಕ್ಸ್‌ ಬೇಸಿಕ್ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಒಂದು ವರ್ಷದ Adobe Premiere Express ಚಂದಾದಾರಿಕೆ ಸಹ ಲಭ್ಯ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile