ನಿಮಗೆ ಪ್ರತಿದಿನ 3GB ಡೇಟಾ ಅಗತ್ಯ ಇದ್ದರೆ, Airtel ಟೆಲಿಕಾಂನ ಈ ರೀಚಾರ್ಜ್‌ ಪ್ಲಾನ್‌ ಸೂಪರ್!

ಜನಪ್ರಿಯ ಭಾರ್ತಿ Airtel ಟೆಲಿಕಾಂ ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ವಿ ಕಂಪನಿಗಳಿಗೆ ಸ್ಪರ್ಧೆ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಬಜೆಟ್ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕಂಪನಿಯ ಕೆಲವು ಪ್ಲಾನ್‌ಗಳು ಹೆಚ್ಚು ಉಪಯುಕ್ತವಾಗಿವೆ. ಆ ರೀತಿಯ ಯೋಜನೆಗಳ ಲಿಸ್ಟ್‌ನಲ್ಲಿ 838 ರೂ.ಗಳ ಪ್ರೀಪೇಯ್ಡ್‌ ಯೋಜನೆ ಸಹ ಗಮನ ಸೆಳೆಯುತ್ತದೆ. ಪ್ರಮುಖವಾಗಿ ಅಧಿಕ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಮತ್ತಷ್ಟು ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 838 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.

Airtel 838 ರೂ.ಗಳ ಪ್ಲಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 838 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಈ ಪ್ಲಾನಿನಲ್ಲಿ ಅಮೆಜಾನ್‌ ಪ್ರೈಮ್ ಲೈಟ್, ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಸಹ ಲಭ್ಯ.

airtel

ಏರ್‌ಟೆಲ್‌ ಟೆಲಿಕಾಂನ 979 ರೂ.ಗಳ ಯೋಜನೆಯ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಈ ಪ್ಲಾನಿನಲ್ಲಿ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಸಂಸ್ಥೆಯ 399 ರೂ.ಗಳ ಪ್ಲಾನ್‌ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2.5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಈ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಈ ಪ್ಲಾನಿನಲ್ಲಿ ಅಡೋಬ್ ಎಕ್ಸ್‌ಪ್ರೆಸ್ ಪ್ರಿಮಿಯಂ ಚಂದಾದಾರಿಕೆ ಸಹ ಲಭ್ಯ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile