ನಿಮಗೆ ವಾರ್ಷಿಕ ವ್ಯಾಲಿಡಿಟಿ ಅಗತ್ಯ ಇದ್ದರೆ, Airtel ಟೆಲಿಕಾಂನ ಈ ಪ್ಲಾನ್‌ಗಳನ್ನು ಗಮನಿಸಿ!

HIGHLIGHTS

ಏರ್‌ಟೆಲ್‌ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ವಾರ್ಷಿಕ ವ್ಯಾಲಿಡಿಟಿ ಪ್ರಯೋಜನ

ಈ ಪ್ರೀಪೇಯ್ಡ್‌ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಏರ್‌ಟೆಲ್‌ ಕಂಪನಿಯ ಈ ಯೋಜನೆಗಳಲ್ಲಿ ಪ್ರತಿದಿನ 100 SMS ಪ್ರಯೋಜನ

ನಿಮಗೆ ವಾರ್ಷಿಕ ವ್ಯಾಲಿಡಿಟಿ ಅಗತ್ಯ ಇದ್ದರೆ, Airtel ಟೆಲಿಕಾಂನ ಈ ಪ್ಲಾನ್‌ಗಳನ್ನು ಗಮನಿಸಿ!

ಭಾರ್ತಿ Airtel ಸಂಸ್ಥೆಯು ಗ್ರಾಹಕರಿಗೆ ಅನುಕೂಲಕರ ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸುವ ಮೂಲಕ ಜನಪ್ರಿಯತೆ ಹೊಂದಿದೆ. ಹೀಗೆ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿರುವ ಏರ್‌ಟೆಲ್‌ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ. ಏರ್‌ಟೆಲ್‌ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ಪ್ರೀಪೇಯ್ಡ್‌ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ ಹೆಚ್ಚಿನ ವ್ಯಾಲಿಡಿಟಿ ಪ್ರಯೋಜನ ಪಡೆದಿರುವ ಯೋಜನೆಗಳು ಬೇಡಿಕೆಯಲ್ಲಿ ಇವೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ ಅಧಿಕ ವ್ಯಾಲಿಡಿಟಿ ಪಡೆದ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 256GB ಸ್ಟೋರೇಜ್ ಇರುವ iQOO 15R ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Airtel ಸಂಸ್ಥೆಯ 3599 ರೂ.ಗಳ ಪ್ಲಾನ್‌ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ನಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಅಡೋಬ್ ಎಕ್ಸ್‌ಪ್ರೇಸ್‌ ಪ್ರೀಮಿಯಂ ಚಂದಾದಾರಿಕೆ ಸೌಲಭ್ಯ ಸಿಗಲಿದೆ.

Airtel

ಏರ್‌ಟೆಲ್‌ ಟೆಲಿಕಾಂನ 3999 ರೂ.ಗಳ ಯೋಜನೆ

ಏರ್‌ಟೆಲ್‌ ಕಂಪನಿಯ 3999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 2.5GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಗ್ರಾಹಕರಿಗೆ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಲಭ್ಯ.

ಏರ್‌ಟೆಲ್‌ನ 2249 ರೂ.ಗಳ ಪ್ಲಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 2249 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಒಟ್ಟು 30GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಒಟ್ಟು 3600 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ. ಹಾಗೆಯೇ ಅಡೋಬ್ ಎಕ್ಸ್‌ಪ್ರೇಸ್‌ ಪ್ರೀಮಿಯಂ ಚಂದಾದಾರಿಕೆ ಸೌಲಭ್ಯ ಸಿಗಲಿದೆ.

ಏರ್‌ಟೆಲ್‌ನ 1849 ರೂ.ಗಳ ಪ್ಲಾನ್‌ ಪ್ರಯೋಜನಗಳು

ಏರ್‌ಟೆಲ್‌ ಕಂಪನಿಯ 1849 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಡೇಟಾ ಸೌಲಭ್ಯ ಅಲಭ್ಯ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಒಟ್ಟು 3600 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile