Airtel ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಒಳಗೊಂಡ ರೀಚಾರ್ಜ್‌ ಪ್ಲಾನ್‌ಗಳ ಮಾಹಿತಿ ಇಲ್ಲಿದೆ

HIGHLIGHTS

ಏರ್‌ಟೆಲ್‌ ಟೆಲಿಕಾಂನ ಈ ರೀಚಾರ್ಜ್‌ ಪ್ಲಾನ್‌ಗಳಲ್ಲಿ 28 ದಿನಗಳ ಮಾನ್ಯತೆ

ಏರ್‌ಟೆಲ್‌ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ಪ್ರತಿದಿನ 100 SMS ದೊರೆಯುತ್ತದೆ

ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

Airtel ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಒಳಗೊಂಡ ರೀಚಾರ್ಜ್‌ ಪ್ಲಾನ್‌ಗಳ ಮಾಹಿತಿ ಇಲ್ಲಿದೆ

ಭಾರ್ತಿ Airtel ಟೆಲಿಕಾಂ ಹಲವು ಆಕರ್ಷಕ ರೀಚಾರ್ಜ್‌ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಹೀಗೆ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿರುವ ಏರ್‌ಟೆಲ್‌ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ. ಏರ್‌ಟೆಲ್‌ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ಪ್ರೀಪೇಯ್ಡ್‌ ಯೋಜನೆಗಳು ಬೊಂಬಾಟ್ ಎನಿಸಿವೆ. ಆ ಪೈಕಿ ಏರ್‌ಟೆಲ್‌ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಲಾಂಚ್‌ ಆಗಿಯೇ ಬಿಡ್ತು Motorola Edge 70 Pro+ ಸ್ಮಾರ್ಟ್‌ಫೋನ್‌! ಟ್ರಿಪಲ್‌ ಕ್ಯಾಮೆರಾ

Airtel ಸಂಸ್ಥೆಯ 299 ರೂ.ಗಳ ಪ್ಲಾನ್‌ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 299 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ 1GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

Airtel

ಏರ್‌ಟೆಲ್‌ ಟೆಲಿಕಾಂನ 449 ರೂ.ಗಳ ಯೋಜನೆ

ಏರ್‌ಟೆಲ್‌ ಟೆಲಿಕಾಂ ಸಂಸ್ಥೆಯ 449 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ಸಿಗಲಿದೆ. ಅಲ್ಲದೇ ಜಿಯೋ ಹಾಟ್‌ಸ್ಟಾರ್‌ ಚಂದಾದಾರಿಕೆ ಸಹ ಲಭ್ಯ.

ಏರ್‌ಟೆಲ್‌ ಟೆಲಿಕಾಂನ 349 ರೂ.ಗಳ ಪ್ಲಾನ್‌ ಮಾಹಿತಿ

ಏರ್‌ಟೆಲ್‌ ಕಂಪನಿಯ 349 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಸಹ ದೊರೆಯುತ್ತದೆ.

ಏರ್‌ಟೆಲ್‌ ಟೆಲಿಕಾಂನ 219 ರೂ.ಗಳ ಪ್ಲಾನ್‌ ಮಾಹಿತಿ

ಏರ್‌ಟೆಲ್‌ ಕಂಪನಿಯ 219 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile