ಭಾರ್ತಿ Airtel ಟೆಲಿಕಾಂ ಹಲವು ಆಕರ್ಷಕ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಹೀಗೆ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಿರುವ ಏರ್‌ಟೆಲ್ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್ ಸಹ ಒಳಗೊಂಡಿದೆ. ಏರ್‌ಟೆಲ್ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ಪ್ರೀಪೇಯ್ಡ್ ಯೋಜನೆಗಳು ಬೊಂಬಾಟ್ ಎನಿಸಿವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : ಲಾಂಚ್ ಆಗಿಯೇ ಬಿಡ್ತು Motorola Edge 70 Pro+ ಸ್ಮಾರ್ಟ್‌ಫೋನ್! ಟ್ರಿಪಲ್ ಕ್ಯಾಮೆರಾ
ಏರ್‌ಟೆಲ್ ಟೆಲಿಕಾಂನ 299 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ 1GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.
ಏರ್‌ಟೆಲ್ ಟೆಲಿಕಾಂ ಸಂಸ್ಥೆಯ 449 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ಸಿಗಲಿದೆ. ಅಲ್ಲದೇ ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ಲಭ್ಯ.
ಏರ್‌ಟೆಲ್ ಕಂಪನಿಯ 349 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಸಹ ದೊರೆಯುತ್ತದೆ.
ಏರ್‌ಟೆಲ್ ಕಂಪನಿಯ 219 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ದೊರೆಯುತ್ತದೆ. ಅಲ್ಲದೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಸಿಗಲಿದೆ.