BSNL ಟೆಲಿಕಾಂನ ಈ ಬಜೆಟ್‌ ಪ್ಲಾನ್‌ನಲ್ಲಿ 300 ದಿನಗಳ ವ್ಯಾಲಿಡಿಟಿ ಜೊತೆಗೆ ಆಕರ್ಷಕ ಡೇಟಾ

HIGHLIGHTS

ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ಗಳು ಅತ್ಯುತ್ತಮ

ಬಿಎಸ್‌ಎನ್‌ಎಲ್‌ನ ಈ ರೀಚಾರ್ಜ್‌ ಯೋಜನೆಯಲ್ಲಿ 300 ದಿನಗಳ ವ್ಯಾಲಿಡಿಟಿ

ಬಿಎಸ್‌ಎನ್‌ಎಲ್‌ ಟೆಲಿಕಾಂ ಈ ಪ್ಲಾನಿನಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ SMS ಸೌಲಭ್ಯ

ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ಕಂಪನಿಯು ದೇಶದ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ದೀರ್ಘ ವ್ಯಾಲಿಡಿಟಿ ಯೋಜನೆಗಳ ಮೂಲಕ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಬಿಎಸ್‌ಎನ್‌ಎಲ್‌ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್‌ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 1499 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಬಿಎಸ್‌ಎನ್‌ಎಲ್‌ ಟೆಲಿಕಾಂನ 1499 ರೂ.ಗಳ ಪ್ಲಾನಿನ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಗ್ಗದ ಬೆಲೆಯ Samsung Galaxy F70e 5G ಮೊಬೈಲ್‌ ಈಗ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ!

BSNL ಕಂಪನಿಯ 1499 ರೂ.ಗಳ ಪ್ಲಾನ್ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 1499 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಒಟ್ಟು 32GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 300 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್‌ ಆಕರ್ಷಕ ಎನಿಸುತ್ತದೆ.

ಬಿಎಸ್‌ಎನ್‌ಎಲ್‌ ಸಂಸ್ಥೆಯ 997 ರೂ.ಗಳ ಪ್ಲಾನ್ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 997 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 150 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್‌ ಆಕರ್ಷಕ ಎನಿಸುತ್ತದೆ.

ಬಿಎಸ್‌ಎನ್‌ಎಲ್‌ ಸಂಸ್ಥೆಯ 599 ರೂ.ಗಳ ಪ್ಲಾನ್ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 599 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್‌ ಆಕರ್ಷಕ ಎನಿಸುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :