BSNL
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ದೀರ್ಘಾವಧಿಯ 2,399 ರೂ.ಗಳ ಪ್ರಿಪೇಯ್ಡ್ ಯೋಜನೆಯ ವ್ಯಾಲಿಡಿಟಿಯನ್ನು ಪರಿಷ್ಕರಿಸಿದೆ. ಆಗಸ್ಟ್ 12, 2026 ರಿಂದ ಜಾರಿಗೆ ಬರುವ ಈ ಬದಲಾವಣೆಯಂತೆ ಸಾಮಾನ್ಯವಾಗಿ 365 ದಿನಗಳ ಮಾನ್ಯತೆ ನೀಡುತ್ತಿದ್ದ ಈ ವಾರ್ಷಿಕ ಪ್ಲಾನ್ ಇದೀಗ ಸೀಮಿತ ಅವಧಿಗೆ ಹೆಚ್ಚುವರಿ ವ್ಯಾಲಿಡಿಟಿಯೊಂದಿಗೆ ಲಭ್ಯವಾಗಲಿದೆ. ಹೊಸ ಪರಿಷ್ಕರಣೆಯ ಬಳಿಕ BSNL 2,399 ರೂ.ಗಳ ಯೋಜನೆಯ ವ್ಯಾಲಿಡಿಟಿ 412 ದಿನಗಳಿಗೆ ಹೆಚ್ಚಾಗಿದೆ. ಅಂದರೆ ಗ್ರಾಹಕರಿಗೆ ಸಾಮಾನ್ಯ ವಾರ್ಷಿಕ ಅವಧಿಗಿಂತ ಹೆಚ್ಚುವರಿಯಾಗಿ 47 ದಿನಗಳ ಸೇವಾ ವ್ಯಾಲಿಡಿಟಿ ಲಭ್ಯವಾಗಲಿದೆ. ಹಾಗದರೇ ಬಿಎಸ್‌ಎನ್‌ಎಲ್‌ನ ಈ ಪ್ಲಾನ್‌ನಲ್ಲಿರುವ ಇತರ ಪ್ರಯೋಜನಗಳ ಮಾಹಿತಿಯನ್ನು ಮುಂದೆ ನೋಡೋಣ.
Also Read : ಭಾರತದಲ್ಲಿ Google Pixel Watch 5 ಲಾಂಚ್; ಸ್ಟೈಲಿಶ್ ಲುಕ್ ಜೊತೆಗೆ ಆಕರ್ಷಕ ಫೀಚರ್ಸ್
ಬಿಎಸ್‌ಎನ್‌ಎಲ್ ಟೆಲಿಕಾಂನ 2399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 365 ದಿನಗಳ ಮಾನ್ಯತೆ ಸೌಲಭ್ಯ ಪಡೆದಿದೆ ಆದರೆ ಇದೀಗ ಸೀಮಿತ ಅವಧಿಗೆ 412 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ದೊರೆಯುತ್ತದೆ. ದೀರ್ಘಾವಧಿ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ 1499 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಒಟ್ಟು 32GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 300 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ.
ಬಿಎಸ್‌ಎನ್‌ಎಲ್ ಟೆಲಿಕಾಂನ 997 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 150 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ದೊರೆಯುತ್ತದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ 599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಸಿಗಲಿದೆ.