BSNL ಗ್ರಾಹಕರೇ ಗಮನಿಸಿ! 485 ರೂ.ಗಳ ಪ್ಲಾನ್‌ನಲ್ಲಿ 72 ದಿನಗಳ ವ್ಯಾಲಿಡಿಟಿ

HIGHLIGHTS

ಬಿಎಸ್‌ಎನ್‌ಎಲ್‌ನ ಈ ಯೋಜನೆ ಅಗ್ಗದ ಬೆಲೆಯಲ್ಲಿ ಉತ್ತಮ ಎನಿಸಿದೆ

ಬಿಎಸ್‌ಎನ್‌ಎಲ್‌ನ 485 ರೂ.ಗಳ ಯೋಜನೆಯಲ್ಲಿ 72 ದಿನಗಳ ಮಾನ್ಯತೆ

ಈ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ

BSNL ಗ್ರಾಹಕರೇ ಗಮನಿಸಿ! 485 ರೂ.ಗಳ ಪ್ಲಾನ್‌ನಲ್ಲಿ 72 ದಿನಗಳ ವ್ಯಾಲಿಡಿಟಿ

ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ದೇಶೀಯ ವಲಯದಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಬಿಎಸ್‌ಎನ್‌ಎಲ್‌ ಕಂಪನಿಯು ಹೆಚ್ಚಿನ ಬಳಕೆದಾರರನ್ನು ಆಕರ್ಷಿಸಲು ಭಿನ್ನ ಬೆಲೆಯ ಪ್ಲಾನ್‌ ಆಯ್ಕೆಗಳನ್ನು ನೀಡಿದೆ. ಅವುಗಳಲ್ಲಿ ಬಜೆಟ್‌ ದರದಲ್ಲಿ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಮುಖ್ಯವಾಗಿ ದೀರ್ಘ ವ್ಯಾಲಿಡಿಟಿ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಒಳಗೊಂಡ ಪ್ಲಾನ್‌ಗಳು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಬಿಎಸ್‌ಎನ್‌ಎಲ್‌ ಟೆಲಿಕಾಂನ 485 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 72 ದಿನಗಳ ವ್ಯಾಲಿಡಿಟಿ ಸಹ ಒಳಗೊಂಡಿದೆ. ಹಾಗಾದರೆ ಬಿಎಸ್‌ಎನ್‌ಎಲ್‌ ಟೆಲಿಕಾಂನ 485 ರೂ.ಗಳ ಪ್ಲಾನ್‌ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ನಾಳೆ ದೇಶೀಯ ಮಾರುಕಟ್ಟೆಗೆ Motorola Edge 70 Pro ಬಿಡುಗಡೆ! ಜಬರ್ದಸ್ತ್‌ ಫೀಚರ್ಸ್‌ ನಿರೀಕ್ಷೆ

BSNL ಟೆಲಿಕಾಂನ 485 ರೂ.ಗಳ ಪ್ಲಾನ್ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 485 ರೂ.ಗಳ ವಾರ್ಷಿಕ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

BSNL

ಬಿಎಸ್‌ಎನ್‌ಎಲ್‌ ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 1499 ರೂ.ಗಳ ಪ್ರೀಪೇಯ್ಡ್‌ ಪ್ಲಾನ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 300 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಒಟ್ಟಾರೆ ವ್ಯಾಲಿಡಿಟಿ ಅವಧಿಗೆ 32GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 1999 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 330 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಅನಿಯಮಿತ ಡೇಟಾ (ದಿನ 1.5GB ಡೇಟಾ) ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 2399 ರೂ.ಗಳ ಪ್ರೀಪೇಯ್ಡ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ಮಾನ್ಯತೆ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo