BSNL ಗ್ರಾಹಕರಿಗೆ ಸಿಹಿಸುದ್ದಿ: 485 ರೂ.ಗಳ ಪ್ಲಾನ್‌ನಲ್ಲಿ ಏನೆಲ್ಲಾ ಪ್ರಯೋಜನಗಳಿವೆ?
ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ಕಂಪನಿಯು ದೇಶದ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ದೀರ್ಘ ವ್ಯಾಲಿಡಿಟಿ ಯೋಜನೆಗಳ ಮೂಲಕ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಫೈಟ್ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಬಿಎಸ್‌ಎನ್‌ಎಲ್ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 485 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ 485 ರೂ.ಗಳ ಪ್ಲಾನಿನ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
BSNL ಕಂಪನಿಯ 485 ರೂ.ಗಳ ಪ್ಲಾನ್ ಮಾಹಿತಿ
ಬಿಎಸ್‌ಎನ್‌ಎಲ್ ಟೆಲಿಕಾಂನ 485 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ಬಿಎಸ್‌ಎನ್‌ಎಲ್ ಸಂಸ್ಥೆಯ 599 ರೂ.ಗಳ ಪ್ಲಾನ್ ಮಾಹಿತಿ
ಬಿಎಸ್‌ಎನ್‌ಎಲ್ ಟೆಲಿಕಾಂನ 599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.
ಬಿಎಸ್‌ಎನ್‌ಎಲ್ ಸಂಸ್ಥೆಯ 997 ರೂ.ಗಳ ಪ್ಲಾನ್ ಮಾಹಿತಿ
ಬಿಎಸ್‌ಎನ್‌ಎಲ್ ಟೆಲಿಕಾಂನ 997 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 150 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್ ಆಕರ್ಷಕ ಎನಿಸುತ್ತದೆ.