BSNL 997 ರೂ.ಗಳ ಪ್ಲಾನ್‌: 150 ದಿನಗಳ ವ್ಯಾಲಿಡಿಟಿ ಜೊತೆಗೆ ಪ್ರತಿದಿನ 2GB ಡೇಟಾ ಸೌಲಭ್ಯ

HIGHLIGHTS

ಬಿಎಸ್‌ಎನ್‌ಎಲ್‌ನ ಈ ಯೋಜನೆ ಬಜೆಟ್‌ ಬೆಲೆಯಲ್ಲಿ ಆಕರ್ಷಕ ಎನಿಸಿದೆ

ಬಿಎಸ್‌ಎನ್‌ಎಲ್‌ನ 997 ರೂ.ಗಳ ಯೋಜನೆಯಲ್ಲಿ 150 ದಿನಗಳ ವ್ಯಾಲಿಡಿಟಿ ಲಭ್ಯ

ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ

BSNL 997 ರೂ.ಗಳ ಪ್ಲಾನ್‌: 150 ದಿನಗಳ ವ್ಯಾಲಿಡಿಟಿ ಜೊತೆಗೆ ಪ್ರತಿದಿನ 2GB ಡೇಟಾ ಸೌಲಭ್ಯ

ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ಮಾರುಕಟ್ಟೆಯಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಬಿಎಸ್‌ಎನ್‌ಎಲ್‌ ಕಂಪನಿಯು ಅಧಿಕ ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅವುಗಳಲ್ಲಿ ಬಜೆಟ್‌ ದರದಲ್ಲಿ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಮುಖ್ಯವಾಗಿ ದೀರ್ಘ ವ್ಯಾಲಿಡಿಟಿ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಒಳಗೊಂಡ ಪ್ಲಾನ್‌ಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಬಿಎಸ್‌ಎನ್‌ಎಲ್‌ ಟೆಲಿಕಾಂನ 997 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಎಸ್‌ಎಮ್‌ಎಸ್‌ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 150 ದಿನಗಳ ವ್ಯಾಲಿಡಿಟಿ ಸಹ ಒಳಗೊಂಡಿದೆ. ಹಾಗಾದರೆ ಬಿಎಸ್‌ಎನ್‌ಎಲ್‌ ಟೆಲಿಕಾಂನ 997 ರೂ.ಗಳ ಪ್ಲಾನ್‌ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Xiaomi ಕಂಪನಿಯಿಂದ ಹೊಸ ಸ್ಮಾರ್ಟ್‌ಟಿವಿ ಸರಣಿ ಬಿಡುಗಡೆ; ಜಬರ್ದಸ್ತ್‌ ಸೌಂಡ್‌ ವ್ಯವಸ್ಥೆ

BSNL ಟೆಲಿಕಾಂನ 997 ರೂ.ಗಳ ಯೋಜನೆಯ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 997 ರೂ.ಗಳ ವಾರ್ಷಿಕ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 150 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಗ್ರಾಹಕರು ಈ ಯೋಜನೆಯನ್ನು CTOPUP/ ಆನ್‌ಲೈನ್ ಪೋರ್ಟಲ್‌ಗಳು/ Selfcare ಅಪ್ಲಿಕೇಶನ್ ಮೂಲಕ ರೀಚಾರ್ಜ್‌ ಮಾಡಿಸಬಹುದಾಗಿದೆ.

BSNL

ಬಿಎಸ್‌ಎನ್‌ಎಲ್‌ ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ಬಿಎಸ್‌ಎನ್‌ಎಲ್‌ ಟೆಲಿಕಾಂನ 897 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 165 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಒಟ್ಟಾರೆ ವ್ಯಾಲಿಡಿಟಿ ಅವಧಿಗೆ 24GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 485 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ 299 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo