BSNL 997 ರೂ.ಗಳ ಪ್ಲಾನ್‌ನಲ್ಲಿ ಪ್ರತಿದಿನ ಡೇಟಾ ಜೊತೆಗೆ 150 ದಿನಗಳ ವ್ಯಾಲಿಡಿಟಿ! ಇಲ್ಲಿದೆ ವಿವರ
ಬಿಎಸ್‌ಎನ್‌ಎಲ್ ಸಂಸ್ಥೆಯ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ
ಬಿಎಸ್‌ಎನ್‌ಎಲ್ ಕಂಪನಿಯ 997 ರೂ.ಗಳ ಪ್ಲಾನ್‌ನಲ್ಲಿ 150 ದಿನಗಳ ವ್ಯಾಲಿಡಿಟಿ
ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ
ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ಕಂಪನಿಯು ಹಲವು ಆಕರ್ಷಕ ರೀಚಾರ್ಜ್ ಯೋಜನೆಗಳ ಮೂಲಕ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಈಗಾಗಲೇ ಭಿನ್ನ ಬೆಲೆಯ ಯೋಜನೆಗಳನ್ನು ಪರಿಚಯಿಸಿರುವ ಬಿಎಸ್‌ಎನ್‌ಎಲ್ ಟೆಲಿಕಾಂ ಬೆಸ್ಟ್ ಡೇಟಾ ಹಾಗೂ ವ್ಯಾಲಿಡಿಟಿ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ಬಿಎಸ್‌ಎನ್‌ಎಲ್ ಸಂಸ್ಥೆಯ ಯೋಜನೆಗಳ ಪಟ್ಟಿಯಲ್ಲಿ ಕಡಿಮೆ ಬೆಲೆಯಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಗ್ರಾಹಕಸ್ನೇಹಿ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಯೋಜನೆಗಳು ಹೆಚ್ಚು ಜನಪ್ರಿಯತೆ ಹೊಂದಿವೆ. ಆ ಪೈಕಿ ಬಿಎಸ್‌ಎನ್‌ಎಲ್ ಟೆಲಿಕಾಂನ 997 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಬೆಲೆಯಲ್ಲಿ ಆಕರ್ಷಕ ಎನಿಸಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 150 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ 997 ರೂ.ಗಳ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಅಂತೂ ಇಂತೂ ಲಾಂಚ್ ಆಯ್ತು Redmi Turbo 5 ಸ್ಮಾರ್ಟ್‌ಫೋನ್! 100W ಫಾಸ್ಟ್ ಚಾರ್ಜಿಂಗ್ ಹೈಲೈಟ್
BSNL ಕಂಪನಿಯ 997 ರೂ.ಗಳ ರೀಚಾರ್ಜ್ ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 997 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 150 ದಿನಗಳ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಇದರೊಂದಿಗೆ ಗ್ರಾಹಕರಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಹ ಲಭ್ಯ.

ಬಿಎಸ್‌ಎನ್‌ಎಲ್‌ನ ಇತರೆ ಬೆಸ್ಟ್ ಪ್ಲಾನ್‌ಗಳ ಮಾಹಿತಿ
ಜಿಯೋ ಟೆಲಿಕಾಂನ 599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಬಳಕೆದಾರರಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗುತ್ತದೆ.
ಜಿಯೋ ಟೆಲಿಕಾಂನ 485 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ನಿತ್ಯ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯವಾಗಲಿದೆ.
ಜಿಯೋ ಟೆಲಿಕಾಂನ 347 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 50 ದಿನಗಳ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ನಿತ್ಯ 2GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಹಾಗೆಯೇ ಬಳಕೆದಾರರಿಗೆ ಈ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗುವುದು ಖಚಿತ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
