ಅಗ್ಗದ ಬೆಲೆಯಲ್ಲಿ ಲಭ್ಯವಿರುವ Jio ಟೆಲಿಕಾಂನ ಬೊಂಬಾಟ್ ರೀಚಾರ್ಜ್ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ
ಅಗ್ಗದ ದರದಲ್ಲಿ ಲಭ್ಯವಿರುವ ಬೆಸ್ಟ್ ಜಿಯೋ ಟೆಲಿಕಾಂ ಪ್ಲಾನ್‌ಗಳು
ಜಿಯೋ ಟೆಲಿಕಾಂನ ಈ ರೀಚಾರ್ಜ್ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್ ಕರೆ ಸೌಲಭ್ಯ
Jio ಸಂಸ್ಥೆಯು ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಂಪನಿಯು ತನ್ನ ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಅಧಿಕ ಗ್ರಾಹಕರನ್ನು ಸೆಳೆದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಯೋಜನೆಗಳ ಮೂಲಕ ವಿ ಟೆಲಿಕಾಂ ಹಾಗೂ ಏರ್‌ಟೆಲ್ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಅಧಿಕ ಗ್ರಾಹಕರನ್ನು ಸೆಳೆದಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರನ್ನು ಆಕರ್ಷಿಸಿವೆ. ಅದಾಗ್ಯೂ ಅಗ್ಗದ ಬೆಲೆಯ ಒಳಗಿನ ಕೆಲವು ಯೋಜನೆಗಳು ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ ಅಗ್ಗದ ಬೆಲೆಯ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Independence Day 2026 Wishes in Kannada: ಇಲ್ಲಿವೆ 20+ ದೇಶಭಕ್ತಿ ಸಾರುವ ಶುಭಾಶಯ ಸಂದೇಶಗಳು
Jio 459 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 459 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ (ಹೆಚ್ಚುವರಿ 5GB ಡೇಟಾ) ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಫ್ಯಾನ್‌ಕೋಡ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

ಜಿಯೋ ಸಂಸ್ಥೆಯ 450 ರೂ.ಗಳ ಯೋಜನೆ
ಜಿಯೋ ಟೆಲಿಕಾಂನ 450 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 36 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಜಿಯೋ ಸಂಸ್ಥೆಯ 349 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 349 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ಜಿಯೋ ಸಂಸ್ಥೆಯ 399 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಫ್ಯಾನ್‌ಕೋಡ್, ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
