28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದ Jio ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

HIGHLIGHTS

ಜಿಯೋ ಟೆಲಿಕಾಂನ ಈ ಯೋಜನೆಗಳಲ್ಲಿ 28 ದಿನಗಳ ವ್ಯಾಲಿಡಿಟಿ ಖಚಿತ

ಈ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಜಿಯೋ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ಪ್ರತಿದಿನ 100 SMS ದೊರೆಯುತ್ತದೆ

28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದ Jio ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

ರಿಲಾಯನ್ಸ್‌ Jio ಟೆಲಿಕಾಂ ಆಕರ್ಷಕ ರೀಚಾರ್ಜ್‌ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಟೆಲಿಕಾಂ ಆಕರ್ಷಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ. ಜಿಯೋ ಟೆಲಿಕಾಂನ ಜನಪ್ರಿಯ ಯೋಜನೆಗಳ ಲಿಸ್ಟ್‌ನಲ್ಲಿ ಬಜೆಟ್‌ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಅಗ್ಗದ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡಿರುವ ರೀಚಾರ್ಜ್‌ ಯೋಜನೆಗಳು ಅತ್ಯುತ್ತಮ ಎನಿಸಿವೆ. ಆ ಪೈಕಿ ಜಿಯೋ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಯೋಜನೆಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 28 ದಿನಗಳ ವ್ಯಾಲಿಡಿಟಿ ಇರುವ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಬೆಲೆಯಲ್ಲಿ ಈಗ ಭಾರೀ ಡಿಸ್ಕೌಂಟ್‌!

Jio ಸಂಸ್ಥೆಯ 459 ರೂ.ಗಳ ಯೋಜನೆ

ಜಿಯೋ ಟೆಲಿಕಾಂನ 459 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

jio

ಜಿಯೋ ಟೆಲಿಕಾಂನ 200 ರೂ.ಗಳ ಪ್ಲಾನ್‌

ಜಿಯೋ ಕಂಪನಿಯ 200 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ಜಿಯೋ ಟೆಲಿಕಾಂನ 399 ರೂ.ಗಳ ಪ್ಲಾನ್‌

ಜಿಯೋ ಕಂಪನಿಯ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

ಜಿಯೋ ಸಂಸ್ಥೆಯ 500 ರೂ.ಗಳ ಪ್ಲಾನ್‌

ಜಿಯೋ ಕಂಪನಿಯ 500 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile