Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಸಿಗುತ್ತೆ 200 ದಿನಗಳ ವ್ಯಾಲಿಡಿಟಿ ಜೊತೆಗೆ ಭರ್ಜರಿ ಡೇಟಾ

Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಸಿಗುತ್ತೆ 200 ದಿನಗಳ ವ್ಯಾಲಿಡಿಟಿ ಜೊತೆಗೆ ಭರ್ಜರಿ ಡೇಟಾ

ಜನಪ್ರಿಯ Jio ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ವಿ ಸಂಸ್ಥೆಗಳಿಗೆ ನೇರ ಟಕ್ಕರ್ ನೀಡಿದೆ. ಆ ಪೈಕಿ ಜಿಯೋ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 2025 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 2025 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Jio ಸಂಸ್ಥೆಯ 2025 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 2025 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 200 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.

Jio Best Plans with best benefits for users
Jio

ಜಿಯೋ 3599 ರೂ.ಗಳ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 3599 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ನೆಟ್‌ಫ್ಲಿಕ್ಸ್‌ ಬೇಸಿಕ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.

ಜಿಯೋ ಸಂಸ್ಥೆಯ 1199 ರೂ.ಗಳ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಸೌಲಭ್ಯ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile