Jio ಟೆಲಿಕಾಂನ ಅಗ್ಗದ ರೀಚಾರ್ಜ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ! ಡೇಟಾ ಜೊತೆಗೆ ಬೆಸ್ಟ್ ವ್ಯಾಲಿಡಿಟಿ

HIGHLIGHTS

ಜಿಯೋ ಟೆಲಿಕಾಂನ ಈ ಪ್ಲಾನ್‌ಗಳು 500 ರೂ.ಗಳ ಒಳಗೆ ಲಭ್ಯ

ಈ ಅಗ್ಗದ ಯೋಜನೆಗಳು ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿವೆ

ಜಿಯೋದ ಈ ಯೋಜನೆಗಳು ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹೊಂದಿವೆ

Jio ಈಗಾಗಲೇ ಭಾರತೀಯ Telecom ವಲಯದಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ ಕಂಪನಿಯು ಭಿನ್ನ ದರದಲ್ಲಿ ಹಲವು ಪ್ರೀಪೇಯ್ಡ್‌ ಪ್ಲಾನ್‌ಗಳ ಆಯ್ಕೆಯನ್ನು ತನ್ನ ಗ್ರಾಹಕರಿಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ 500 ರೂ.ಗಳ ಒಳಗೆ ಲಭ್ಯವಿರುವ ಅಗ್ಗದ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿವೆ. ಅದರಲ್ಲಿಯೂ ಮುಖ್ಯವಾಗಿ ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿರುವ ಪ್ರೀಪೇಯ್ಡ್‌ ಯೋಜನೆಗಳು ಟ್ರೆಂಡ್‌ನಲ್ಲಿ ಗುರುತಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಪ್ಲಾನ್‌ಗಳು ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಈ ವರ್ಗದಲ್ಲಿನ ಕೆಲವು ಪ್ಲಾನ್‌ಗಳು ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಒಳಗೊಂಡಿವೆ. ಹಾಗಾದರೆ 500 ರೂ.ಗಳ ಒಳಗೆ ಲಭ್ಯವಿರುವ ಜಿಯೋ ಟೆಲಿಕಾಂನ ಅತ್ಯುತ್ತಮ ರೀಚಾರ್ಜ್‌ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

Also Read : ನಾಳೆ Vivo T5X 5G ಫಸ್ಟ್‌ ಸೇಲ್‌ ಪ್ರಾರಂಭ! ಬಜೆಟ್‌ ಬೆಲೆಯಲ್ಲಿ ಆಕರ್ಷಕ ಫೋನ್‌

Jio Telecom ನ 445 ರೂಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 445 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 56GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ Sony LIV, ZEE5, Lionsgate Play, Discovery+, Sun NXT, Kanccha Lanka, Planet Marathi, Chaupal, FanCode, Hoichoi, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ.

Jio Telecom ನ 329 ರೂಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 329 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 42GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioSaavn Pro, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ದೊರೆಯುತ್ತದೆ.

Jio Telecom ನ 299 ರೂಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 299 ರೂಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ ಅಲ್ಲದೇ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 42GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ಹಾಗೆಯೇ ಈ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಸಿಗಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :