Jio ಬಳಕೆದಾರರೇ ಅಧಿಕ ಡೇಟಾ ಬೇಕಿದ್ದರೆ ಈ ರೀಚಾರ್ಜ್ ಪ್ಲಾನ್‌ಗಳನ್ನು ಒಮ್ಮೆ ಗಮನಿಸಿ!
ಅಧಿಕ ಡೇಟಾ ಬಯಸುವ ಗ್ರಾಹಕರಿಗೆ Jio ಟೆಲಿಕಾಂನ ಈ ಪ್ಲಾನ್ ಬೆಸ್ಟ್
Jio ಟೆಲಿಕಾಂನ ಈ ಮೂರು ರೀಚಾರ್ಜ್ ಪ್ಲಾನ್‌ಗಳಲ್ಲಿ 3GB ಡೇಟಾ ಸಿಗುತ್ತೆ
Jio ಕಂಪನಿಯ ಈ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್ ಕರೆ ಹಾಗೂ 100 SMS ಸೌಲಭ್ಯ ಲಭ್ಯ
ಜನಪ್ರಿಯ Jio ಸಂಸ್ಥೆಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಹಾಗೂ ವಿ ಸಂಸ್ಥೆಗಳಿಗೆ ನೇರ ಟಕ್ಕರ್ ನೀಡಿದೆ. ಆ ಪೈಕಿ Jio ಕಂಪನಿಯ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಈ ಪ್ಲಾನ್‌ಗಳಲ್ಲಿ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ Jio ಟೆಲಿಕಾಂನ ಪ್ರತಿದಿನ 3GB ಡೇಟಾ ಪ್ರಯೋಜನ ನೀಡುವ ಕೆಲವು ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟ Samsung Galaxy A07 5G ಮೊಬೈಲ್! ಬೆಲೆ ಎಷ್ಟು ನೋಡಿ
Jio ಸಂಸ್ಥೆಯ 449ರೂಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 449 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 84GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.

Jio ಸಂಸ್ಥೆಯ 1199ರೂಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 1199 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.
Jio ಸಂಸ್ಥೆಯ 1799ರೂಗಳ ಪ್ಲಾನ್ ಮಾಹಿತಿ
Jio ಟೆಲಿಕಾಂನ 1799 ರೂಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ದೈನಂದಿನ 3GB Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 252GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ Netflix ಬೇಸಿಕ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile