Amazon Prime Video ಚಂದಾದಾರಿಕೆ ಒಳಗೊಂಡ Jio ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳು

HIGHLIGHTS

ಈ ಪ್ಲಾನ್‌ಗಳಲ್ಲಿ ಅಮೆಜಾನ್‌ ಪ್ರೈಮ್‌ ವಿಡಿಯೋ ಚಂದಾದಾರಿಕೆ

ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಸೌಲಭ್ಯ

ಜಿಯೋ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 SMS ದೊರೆಯುತ್ತದೆ

Jio ಟೆಲಿಕಾಂ ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ವಿ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಭಿನ್ನ ಬೆಲೆಯಲ್ಲಿ ಈಗಾಗಲೇ ಹಲವು ಪ್ಲಾನ್‌ಗಳಲ್ಲಿ ಗ್ರಾಹಕರಿಗೆ ನೀಡಿರುವ ಜಿಯೋ ಸಂಸ್ಥೆಯು ಪ್ರತಿದಿನ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳನ್ನು ಸಹ ಒಳಗೊಂಡಿದೆ. ಹಾಗೆಯೇ ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಬಜೆಟ್‌ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಪ್ರಯೋಜನ ಹೊಂದಿರುವ ರೀಚಾರ್ಜ್‌ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೆ ಜಿಯೋ ಟೆಲಿಕಾಂನ Amazon Prime Video ಚಂದಾದಾರಿಕೆ ಸೌಲಭ್ಯದ ಅತ್ಯುತ್ತಮ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : ವಿವೋ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! Vivo T4 Lite 5G ಬೆಲೆಯಲ್ಲಿ ಭರ್ಜರಿ ಇಳಿಕೆ

Jio 500 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಕಂಪನಿಯ 500 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ ಇದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ಬಜೆಟ್‌ ದರದ ಯೋಜನೆಯಲ್ಲಿ ಅಮೆಜಾನ್‌ ಪ್ರೈಮ್‌ ವಿಡಿಯೋ ಚಂದಾದಾರಿಕೆ ಸಹ ಲಭ್ಯ.

ಜಿಯೋ ಕಂಪನಿಯ 200 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂ 200 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಒಟ್ಟು 30GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ಪ್ರೀಪೇಯ್ಡ್‌ ಯೋಜನೆಯಲ್ಲಿ ಅಮೆಜಾನ್‌ ಪ್ರೈಮ್‌ ವಿಡಿಯೋ ಚಂದಾದಾರಿಕೆ ಸಹ ಲಭ್ಯ.

ಜಿಯೋ ಕಂಪನಿಯ 1029 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂ 1029 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯ ಇದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 168GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಅಮೆಜಾನ್‌ ಪ್ರೈಮ್‌ ವಿಡಿಯೋ ಚಂದಾದಾರಿಕೆ ಸಹ ಲಭ್ಯ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :