Jio ಟೆಲಿಕಾಂನ ಈ ಯೋಜನೆಯಲ್ಲಿ ಅಮೆಜಾನ್ ಪ್ರೈಮ್ ಚಂದಾದಾರಿಕೆ ಜೊತೆಗೆ ಡೇಟಾ ಸೌಲಭ್ಯ
ಜಿಯೋ ಸಂಸ್ಥೆಯ ಈ ಯೋಜನೆಯಲ್ಲಿ 168GB ಡೇಟಾ ಸಿಗುತ್ತೆ
ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯ್ಸ್ ಕರೆಗಳ ಸೌಲಭ್ಯ
ಜಿಯೋ ಕಂಪನಿಯ ಈ ಪ್ಲಾನ್‌ನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ
ಆಕರ್ಷಕ ರೀಚಾರ್ಜ್ ಯೋಜನೆಗಳ ಮೂಲಕ ಹೆಚ್ಚಿನ ಬಳಕೆದಾರರನ್ನು ಸೆಳೆದಿರುವ ರಿಲಾಯನ್ಸ್ Jio ಟೆಲಿಕಾಂ ಮಾರುಕಟ್ಟೆಯಲ್ಲಿ ಲೀಡಿಂಗ್ ಸ್ಥಾನದಲ್ಲಿ ಇದೆ. ಈ ಸಂಸ್ಥೆಯು ಅತ್ಯುತ್ತಮ ಪ್ಲಾನ್‌ಗಳ ಈ ಮೂಲಕ ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂ ಕಂಪನಿಯ ಬಿಗ್ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ 1029 ರೂ.ಗಳ ಯೋಜನೆಯು ಉತ್ತಮ ವ್ಯಾಲಿಡಿಟಿ, ದೈನಂದಿನ ಡೇಟಾ ಪ್ರಯೋಜನದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯ ಪಡೆದುಕೊಂಡಿದ್ದು, ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 1029 ರೂ.ಗಳ ಯೋಜನೆಯ ಪ್ರಯೋಜಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Samsung Galaxy M56 5G ಖರೀದಿಸಲು ಇದು ಬೆಸ್ಟ್ ಟೈಮ್! ಈ ಆಫರ್‌ಗೆ ನೀವು ಫಿದಾ ಆಗ್ತೀರಾ
Jio ಸಂಸ್ಥೆಯ 1029 ರೂ.ಗಳ ಪ್ಲಾನ್ ಮಾಹಿತಿ
ಜಿಯೋ ಕಂಪನಿಯ 1029 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಅಲ್ಲದೇ ಈ ಯೋಜನೆಯಲ್ಲಿ ಅಮೆಜಾನ್ ಪ್ರೈಮ್ ಲೈಟ್ ಚಂದಾದಾರಿಕೆ ಸಹ ಲಭ್ಯ. ಬಜೆಟ್ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಕ್ತ ಎನ್ನಬಹುದು.

ಜಿಯೋ ಟೆಲಿಕಾಂನ 999 ರೂ.ಗಳ ಯೋಜನೆ ಮಾಹಿತಿ
ಜಿಯೋ ಕಂಪನಿಯ 999 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 98 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಬಯಸುವ ಬಳಕೆದಾರರು ಈ ಪ್ಲಾನ್ ಸೂಕ್ತ ಎನ್ನಬಹುದು.
ಜಿಯೋ ಟೆಲಿಕಾಂನ 899 ರೂ.ಗಳ ಯೋಜನೆ ಮಾಹಿತಿ
ಜಿಯೋ ಕಂಪನಿಯ 899 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB ಡೇಟಾ + (20GB) ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಬೆಸ್ಟ್ ಎನ್ನಬಹುದು.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
