Jio ಗ್ರಾಹಕರೇ 1049 ರೂ.ಗಳ ಈ ರೀಚಾರ್ಜ್‌ನಲ್ಲಿ 168GB ಡೇಟಾ ಜೊತೆಗೆ ಓಟಿಟಿ ಸೌಲಭ್ಯ!

HIGHLIGHTS

ಈ ಯೋಜನೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಓಟಿಟಿ ಸೌಲಭ್ಯ ಸಿಗುತ್ತದೆ

ಜಿಯೋ ಕಂಪನಿಯ ಈ ರೀಚಾರ್ಜ್‌ ಯೋಜನೆಯಲ್ಲಿ 84 ದಿನಗಳ ವ್ಯಾಲಿಡಿಟಿ

ಜಿಯೋ ಟೆಲಿಕಾಂ ಈ ಯೋಜನೆಗಳಲ್ಲಿ ಉಚಿತ ವಾಯ್ಸ್‌ ಕರೆ ಹಾಗೂ SMS ಸೌಲಭ್ಯ

Jio ಗ್ರಾಹಕರೇ 1049 ರೂ.ಗಳ ಈ ರೀಚಾರ್ಜ್‌ನಲ್ಲಿ 168GB ಡೇಟಾ ಜೊತೆಗೆ ಓಟಿಟಿ ಸೌಲಭ್ಯ!

Jio ಕಂಪನಿಯು ದೇಶದ ಟೆಲಿಕಾಂ ವಲಯದಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ. ಸಂಸ್ಥೆಯು ತನ್ನ ಬಳಕೆದಾರರಿಗೆ ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ವಿ ಹಾಗೂ ಏರ್‌ಟೆಲ್‌ ಸಂಸ್ಥೆಗಳಿಗೆ ನೇರ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್‌ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಆ ಪೈಕಿ 1049 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 1049 ರೂ.ಗಳ ಪ್ಲಾನಿನ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಶೀಘ್ರದಲ್ಲೇ ಲಾಂಚ್‌ ಆಗಲಿದೆ ಹೊಸ Redmi Note 17 ಮೊಬೈಲ್‌ ಸರಣಿ! ನಿರೀಕ್ಷಿತ ಫೀಚರ್ಸ್‌ ಹೀಗಿವೆ

Jio ಕಂಪನಿಯ 1049 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 1049 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್‌ ಆಕರ್ಷಕ ಎನಿಸುತ್ತದೆ. ಇದರೊಂದಿಗೆ ಸೋನಿ ಲೈವ್‌ ಹಾಗೂ ಜೀ5 ಓಟಿಟಿ ಚಂದಾದಾರಿಕೆ ಸಹ ಲಭ್ಯ.

jio introduced Jio OTT Pass with 15 ott apps access

ಜಿಯೋ ಸಂಸ್ಥೆಯ 579 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಕಡಿಮೆ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಬೇಕು ಎನ್ನುವ ಗ್ರಾಹಕರಿಗೆ ಈ ಪ್ಲಾನ್‌ ಆಕರ್ಷಕ ಎನಿಸುತ್ತದೆ.

ಜಿಯೋ ಸಂಸ್ಥೆಯ 889 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಟೆಲಿಕಾಂನ 889 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ನಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಜಿಯೋ ಸಾವನ್ ಸಹ ಲಭ್ಯ. ಬಜೆಟ್‌ ದರದಲ್ಲಿ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಆಕರ್ಷಕ ಎನಿಸುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile