Jio
ಜನಪ್ರಿಯ Jio ಟೆಲಿಕಾಂ ಕಂಪನಿಯು ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಟೆಲಿಕಾಂ ಅಧಿಕ ಡೇಟಾ, ಓಟಿಟಿ ಯೋಜನೆಗಳ ಲಿಸ್ಟ್ ಸಹ ಒಳಗೊಂಡಿದೆ. ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಅಗ್ಗದ ಬೆಲೆಯಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಯೋಜನೆಗಳು ಬೇಡಿಕೆ ಪಡೆದಿವೆ. ಆ ಪೈಕಿ ಜಿಯೋ ಟೆಲಿಕಾಂನ 1199 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಬೆಲೆಯಲ್ಲಿ ಆಕರ್ಷಕ ಎನಿಸಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 1199 ರೂ.ಗಳ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : Realme Narzo Power ಬೆಲೆಯಲ್ಲಿ ಭಾರೀ ಇಳಿಕೆ! 10,001mAh ಬ್ಯಾಟರಿ ಸೌಲಭ್ಯ
ಜಿಯೋ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಎಐ ಕ್ಲೌಡ್ ಚಂದಾದಾರಿಕೆ ಸಿಗಲಿದೆ.
ಜಿಯೋ ಟೆಲಿಕಾಂನ 1799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ನೆಟ್‌ಫ್ಲಿಕ್ಸ್ ಓಟಿಟಿ ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಜಿಯೋ ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಜಿಯೋ ಟಿವಿ, ಜಿಯೋ ಎಐ ಕ್ಲೌಡ್ ಚಂದಾದಾರಿಕೆ ಸಿಗಲಿದೆ.