Jio ಕಂಪನಿಯ 1199 ರೂ.ಗಳ ರೀಚಾರ್ಜ್ ಪ್ಲಾನ್‌ನಲ್ಲಿ ಅಧಿಕ ಡೇಟಾ ಸೌಲಭ್ಯ!
ಜಿಯೋದ 1199 ರೂ.ಗಳ ಪ್ಲಾನ್ ಅಧಿಕ ಡೇಟಾ ಸೌಲಭ್ಯ ಪಡೆದಿದೆ
ಜಿಯೋ ಕಂಪನಿಯ ಈ ರೀಚಾರ್ಜ್ ಪ್ಲಾನ್‌ನಲ್ಲಿ 84 ದಿನಗಳ ವ್ಯಾಲಿಡಿಟಿ
ಜಿಯೋ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲಾನಿನಲ್ಲಿ ಅನಿಯಮಿತ ಉಚಿತ ವಾಯ್ಸ್ ಕರೆ ಸೌಲಭ್ಯ
ಲೀಡಿಂಗ್ ಟೆಲಿಕಾಂ ಎನಿಸಿರುವ ಜಿಯೋ ಸಂಸ್ಥೆಯು ಭಿನ್ನ ರೀಚಾರ್ಜ್ ಯೋಜನೆಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಹಾಗೆಯೇ ಕಂಪನಿಯು ತನ್ನ ಕೆಲವು ಆಕರ್ಷಕ ಯೋಜನೆಗಳ ಮೂಲಕ ಏರ್‌ಟೆಲ್ ಹಾಗೂ ವಿ ಕಂಪನಿಗಳಿಗೆ ನೇರ ಟಾಂಗ್ ನೀಡಿದೆ. ಅವುಗಳ ಪೈಕಿ Jio ಕಂಪನಿಯ ಪ್ರತಿದಿನ ಡೇಟಾ ಪ್ರಯೋಜನ ಜೊತೆಗೆ ಬಿಗ್ ವ್ಯಾಲಿಡಿಟಿ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಪ್ರತಿದಿನ ಹೆಚ್ಚಿನ ಡೇಟಾ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಜಿಯೋದ 1199 ರೂ.ಗಳ ಪ್ಲಾನ್‌ಗಳಲ್ಲಿ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳು ಕೂಡಾ ಸಿಗುತ್ತವೆ. ಹಾಗಾದರೆ ಜಿಯೋ ಸಂಸ್ಥೆಯ 1199 ರೂ.ಗಳ ಯೋಜನೆಯ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : POCO X8 Power ಸ್ಮಾರ್ಟ್‌ಫೋನ್ ಬಿಡುಗಡೆಗೆ ಮುಹೂರ್ತ ಫಿಕ್ಸ್! 10,000m ಬ್ಯಾಟರಿ ಖಚಿತ
Jio ಸಂಸ್ಥೆಯ 1199 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 1199 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರ ಜೊತೆಗೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋ ಕಂಪನಿಯ 449 ರೂ.ಗಳ ಪ್ಲಾನ್ ಮಾಹಿತಿ
ರಿಲಯನ್ಸ್ ಜಿಯೋ ಟೆಲಿಕಾಂನ 449 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ದೈನಂದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ಸಿಗುತ್ತದೆ.
ಜಿಯೋದ 1799 ರೂ.ಗಳ ಪ್ಲಾನ್ ಮಾಹಿತಿ
ರಿಲಯನ್ಸ್ ಜಿಯೋ ಕಂಪನಿಯ 1799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ನೆಟ್‌ಫ್ಲಿಕ್ಸ್ ಬೇಸಿಕ್ ಸೇರಿದಂತೆ ಜಿಯೋ ಟಿವಿ ಓಟಿಟಿ ಪ್ಲಾಟ್‌ಫಾರ್ಮ್ ಗಳ ಚಂದಾದಾರಿಕೆಯ ಪ್ರಯೋಜನ ಸಹ ದೊರೆಯುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
