Jio 2GB Daily Data Plans Offer Bonus Data and Free JioHotstar
ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ Jio ಏರ್‌ಟೆಲ್ ಹಾಗೂ ವಿ ಕಂಪನಿಗಳಿಗೆ ನೇರ ಪೈಪೋಟಿ ನೀಡಿತ್ತಾ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಇನ್ನು ಜಿಯೋ ಟೆಲಿಕಾಂನ ರೀಚಾರ್ಜ್ ಲಿಸ್ಟ್‌ನಲ್ಲಿ ಬಜೆಟ್ ಬೆಲೆಯಲ್ಲಿ ಅಧಿಕ ಡೇಟಾ ಸೌಲಭ್ಯ ಪಡೆದ ಪ್ಲಾನ್‌ಗಳು ಸೇರಿವೆ. ಅದಾಗ್ಯೂ, ಹೆಚ್ಚಿನ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ನಿಗದಿತ ಡೇಟಾ ಪ್ರಯೋಜನ ನೀಡುವ ರೀಚಾರ್ಜ್ ಯೋಜನೆಗಳು ಆಕರ್ಷಕವಾಗಿ ಟ್ರೆಂಡ್‌ನಲ್ಲಿ ಇವೆ. ಆ ಪೈಕಿ ಜಿಯೋ ಟೆಲಿಕಾಂನ 200 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 28 ದಿನಗಳ ವ್ಯಾಲಿಡಿಟಿ ಹಾಗೂ OTT ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 200 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : BSNL ಗ್ರಾಹಕರೇ ಗಮನಿಸಿ! 485 ರೂ.ಗಳ ಪ್ಲಾನ್‌ನಲ್ಲಿ 72 ದಿನಗಳ ವ್ಯಾಲಿಡಿಟಿ
ಜಿಯೋ ಟೆಲಿಕಾಂನ 200 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಜನಪ್ರಿಯ OTT ತಾಣಗಳ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್ ಪ್ಲಾನ್ ಕಂಟೆಂಟ್ ಆಡ್ ಆನ್ ಪ್ಯಾಕ್ ಆಗಿದ್ದು, ಇದರಲ್ಲಿ ವಾಯ್ಸ್ ಕರೆ ಹಾಗೂ ಎಸ್‌ಎಮ್ಎಸ್ ಸೌಲಭ್ಯ ಲಭ್ಯವಿರುವುದಿಲ್ಲ.
ಜಿಯೋ ಟೆಲಿಕಾಂನ 200 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಕಂಟೆಂಟ್ ಆಡ್ ಆನ್ ಪ್ಯಾಕ್ ಆಗಿದೆ. ಇದರಲ್ಲಿ Youtube Premium, Prime Video Mobile, JioHotstar, Sony LIV, ZEE5, Lionsgate Play, Discovery+, Sun NXT, Kanchha Lannka, Planet Marathi, Chaupal, Hoichoi, FanCode, JioTV ಹಾಗೂ JioAICloud ಪ್ಲಾಟ್‌ಫಾರ್ಮ್‌ಗಳ ಚಂದಾದಾರಿಕೆ ಸೌಲಭ್ಯ ದೊರೆಯುತ್ತದೆ.
ಜಿಯೋ ಟೆಲಿಕಾಂನ 445 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಸಿಗಲಿದೆ. ಇದರೊಂದಿಗೆ Sony LIV, ZEE5, Lionsgate Play, Discovery+, Sun NXT, Kanchha Lannka, Planet Marathi, Chaupal ಹಾಗೂ Hoichoi ಸೇರಿದಂತೆ ಹತ್ತು ಓಟಿಟಿ ಚಂದಾದಾರಿಕೆಯ ಪ್ರಯೋಜನ ಲಭ್ಯ. ಅಲ್ಲದೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಸಿಗಲಿದೆ.