Jio ಕಂಪನಿಯ ಈ ಅಗ್ಗದ ಪ್ಲಾನ್‌ನಲ್ಲಿ ಡೇಟಾ ಜೊತೆಗೆ ಅನಿಯಮಿತ ಕರೆಯ ಸೌಲಭ್ಯ!

HIGHLIGHTS

ಜಿಯೋ ಟೆಲಿಕಾಂನ 349 ರೂ.ಗಳ ಪ್ಲಾನಿನಲ್ಲಿ ಆಕರ್ಷಕ ಸೌಲಭ್ಯಗಳು

ಜಿಯೋ ಟೆಲಿಕಾಂನ ಈ ಯೋಜನೆಯಲ್ಲಿ 30GB ಡೇಟಾ ಪ್ರಯೋಜನ

ಜಿಯೋದ 349 ರೂ.ಗಳ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಸಿಗುತ್ತದೆ

Jio ಕಂಪನಿಯ ಈ ಅಗ್ಗದ ಪ್ಲಾನ್‌ನಲ್ಲಿ ಡೇಟಾ ಜೊತೆಗೆ ಅನಿಯಮಿತ ಕರೆಯ ಸೌಲಭ್ಯ!

ಲೀಡಿಂಗ್ ಟೆಲಿಕಾಂ ಸಂಸ್ಥೆ ಎನಿಸಿಕೊಂಡಿರುವ Jio ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಟೆಲಿಕಾಂ ಬಳಕೆದಾರರ ಅಗತ್ಯತೆಗೆ ಅನುಗುಣವಾಗಿ ಹಲವು ಪ್ರೀಪೇಡ್ ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳನ್ನು ಸಹ ಪರಿಚಯಿಸಿದೆ. ಆ ಪೈಕಿ ಜಿಯೋ ಟೆಲಿಕಾಂ 349 ರೂ.ಗಳ ಪೋಸ್ಟ್‌ಪೇಯ್ಡ್‌ ಪ್ಲಾನ್‌ ಬಹಳ ಆಕರ್ಷಕ ಎನಿಸಿದ್ದು, ಕುಟುಂಬ ಬಳಕೆದಾರರು ಮತ್ತು ಹೆಚ್ಚಿನ ಡೇಟಾ ಬಳಸುವವರಿಗೆ ಅತ್ಯುತ್ತಮ ಎನಿಸಿದೆ. ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಆಕರ್ಷಕ ಡೇಟಾ ಪ್ರಯೋಜನ ಹಾಗೂ ಇತರೆ ಹೆಚ್ಚುವರಿ ಪ್ರಯೋಜನಗಳು ಸಹ ದೊರೆಯುತ್ತದೆ. ಹಾಗಾದರೆ ಜಿಯೋ ಟೆಲಿಕಾಂನ 349 ರೂ.ಗಳ ಪೋಸ್ಟ್‌ಪೇಯ್ಡ್‌ ಯೋಜನೆಯ ಹಾಗೂ ಇತರೆ ಜನಪ್ರಿಯ ಪ್ಲಾನ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo T5 Pro 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

Jio 349 ರೂ.ಗಳ ಪೋಸ್ಟ್‌ಪೇಯ್ಡ್‌ ಯೋಜನೆ

ಜಿಯೋ ಟೆಲಿಕಾಂನ 349 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್‌ ಸಿಗುತ್ತದೆ. ಅಲ್ಲದೇ ಈ ಯೋಜನೆಯಲ್ಲಿ 30GB ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ.

Jio Rs 349 Postpaid Pack

ಜಿಯೋದ ಇತರೆ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳು

ಜಿಯೋ ಕಂಪನಿಯ 1549 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್‌ ಆಯ್ಕೆ ಲಭ್ಯವಿರುತ್ತದೆ. ಅಲ್ಲದೇ ಈ ಪ್ಲಾನ್‌ನಲ್ಲಿ 300GB ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌, ಅಮೆಜಾನ್‌ ಪ್ರೈಮ್ ಸೇರಿದಂತೆ ಇತರೆ ಓಟಿಟಿ ಚಂದಾದಾರಿಕೆಯ ಅವಕಾಶ ಲಭ್ಯವಾಗಲಿದೆ.

ಜಿಯೋ ಸಂಸ್ಥೆಯ 749 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್‌ ಸಿಗುತ್ತದೆ. ಅಲ್ಲದೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ. ಇದರೊಂದಿಗೆ ನೆಟ್‌ಫ್ಲಿಕ್ಸ್‌ ಬೇಸಿಕ್‌ ಓಟಿಟಿ ಸೌಲಭ್ಯ ಸಹ ಸಿಗಲಿದೆ.

ಜಿಯೋ ಕಂಪನಿಯ 449 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್‌ ಜೊತೆಗೆ 3 ಆಡ್‌ ಆನ್‌ ಸಿಮ್‌ ಆಯ್ಕೆ ದೊರೆಯುತ್ತದೆ. ಅಲ್ಲದೇ ಈ ಯೋಜನೆಯಲ್ಲಿ 75GB ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile