Jio ಟೆಲಿಕಾಂನ 399 ರೂ.ಗಳ ಪ್ಲಾನ್‌ನಲ್ಲಿ ಅಧಿಕ ಡೇಟಾ ಜೊತೆಗೆ ಜಬರ್ದಸ್ತ್‌ ಓಟಿಟಿ ಪ್ರಯೋಜನ!

HIGHLIGHTS

ಜಿಯೋ ಸಂಸ್ಥೆಯ ಈ ಪ್ಲ್ಯಾನಿನಲ್ಲಿ ಪ್ರತಿದಿನ 2.5GB ಡೇಟಾ ಸೌಲಭ್ಯ

ಜಿಯೋ ಕಂಪನಿಯ 399 ರೂ.ಗಳ ಪ್ಲಾನ್‌ನಲ್ಲಿ 28 ದಿನಗಳ ವ್ಯಾಲಿಡಿಟಿ

ಜಿಯೋ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ

Jio ಟೆಲಿಕಾಂನ 399 ರೂ.ಗಳ ಪ್ಲಾನ್‌ನಲ್ಲಿ ಅಧಿಕ ಡೇಟಾ ಜೊತೆಗೆ ಜಬರ್ದಸ್ತ್‌ ಓಟಿಟಿ ಪ್ರಯೋಜನ!

ಅಗ್ರಸ್ಥಾನದ ಟೆಲಿಕಾಂ ಕಂಪನಿ ಎಂದೇ ಗುರುತಿಸಿಕೊಂಡಿರುವ ರಿಲಾಯನ್ಸ್‌ Jio ಭಿನ್ನ ಡೇಟಾ ಸೌಲಭ್ಯ ಇರುವ ಯೋಜನೆಗಳ ಆಯ್ಕೆಯನ್ನು ಹೊಂದಿದೆ. ಆಕರ್ಷಕ ಪ್ಲಾನ್‌ಗಳ ಈ ಮೂಲಕ ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂ ಕಂಪನಿಯ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ದೈನಂದಿನ ಡೇಟಾ ಪ್ರಯೋಜನದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯ ಪಡೆದುಕೊಂಡಿರುವ ಯೋಜನೆಗಳು ಹೆಚ್ಚು ಲೀಡಿಂಗ್‌ನಲ್ಲಿ ಇವೆ. ಆ ಪೈಕಿ ಜಿಯೋ ಟೆಲಿಕಾಂನ 399 ರೂ. ಗಳ ಯೋಜನೆ ಗ್ರಾಹಕರ ಗಮನ ಸೆಳೆದಿದೆ. ಹಾಗಾದರೆ ಜಿಯೋ ಟೆಲಿಕಾಂನ ಅನ್‌ಲಿಮಿಟೆಡ್‌ ಡೇಟಾ ಪ್ರಯೋಜನ ನೀಡುವ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 80W SuperVOOC ಚಾರ್ಜಿಂಗ್ ಇರುವ Oppo F33 5G ಫೋನ್‌ ಈಗ ಆಫರ್‌ನಲ್ಲಿ ಲಭ್ಯ!

Jio ಸಂಸ್ಥೆಯ 399 ರೂ.ಗಳ ಪ್ಲಾನ್ ಮಾಹಿತಿ

ರಿಲಾಯನ್ಸ್‌ ಜಿಯೋ ಕಂಪನಿಯ 399 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2.5GB Data ಪ್ರಯೋಜನ ಸಿಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 70GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಅಧಿಕ ಡೇಟಾ ಹಾಗೂ ಓಟಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಕ್ತ ಎನ್ನಬಹುದು. ಹಾಗೆಯೇ ಈ ಯೋಜನೆಯು ಜಿಯೋ ಗೇಮ್ಸ್‌, ಫ್ಯಾನ್‌ ಕೋಡ್‌, ಜಿಯೋ ಹಾಟ್‌ಸ್ಟಾರ್‌ ಓಟಿಟಿ ಚಂದಾದಾರಿಕೆ ಪಡೆದುಕೊಂಡಿದೆ.

Jio

ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ಜಿಯೋ ಕಂಪನಿಯ 459 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data (+5GB) ಪ್ರಯೋಜನ ಸಿಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 61GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯು ಜಿಯೋ ಗೇಮ್ಸ್‌, ಫ್ಯಾನ್‌ ಕೋಡ್‌, ಸ್ನ್ಯಾಪ್‌ಚಾಟ್‌+ ಓಟಿಟಿ ಚಂದಾದಾರಿಕೆ ಪಡೆದುಕೊಂಡಿದೆ.

ಜಿಯೋ ಕಂಪನಿಯ 500 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದ್ದು, ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯು ಯೂಟ್ಯೂಬ್‌ ಪ್ರಿಮಿಯಂ, ಪ್ರೈಮ್‌ ವಿಡಿಯೋ, ಸೋನಿ ಲೈವ್, ಜಿಯೋ ಹಾಟ್‌ಸ್ಟಾರ್‌, ಫ್ಯಾನ್‌ ಕೋಡ್‌ ಸೇರಿದಂತೆ 10ಕ್ಕೂ ಅಧಿಕ ಓಟಿಟಿ ಚಂದಾದಾರಿಕೆ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile