Jio ಗ್ರಾಹಕರಿಗೆ ಸಿಹಿಸುದ್ದಿ! ಈ ಅಗ್ಗದ ಪ್ಲಾನಿನಲ್ಲಿ ಪ್ರತಿದಿನ 2GB ಡೇಟಾ ಜೊತೆಗೆ 10 OTT ಲಭ್ಯ
ಜಿಯೋ ಟೆಲಿಕಾಂನ 445 ರೂ.ಗಳ ಪ್ಲಾನ್‌ನಲ್ಲಿ 10 OTT ಚಂದಾದಾರಿಕೆ
ಜಿಯೋ ಟೆಲಿಕಾಂನ ಈ ಪ್ಲಾನಿನಲ್ಲಿ ಪ್ರತಿದಿನ 2GB Data ಪ್ರಯೋಜನ
ಜಿಯೋದ ಈ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಗಳು ಮತ್ತು SMS ಲಭ್ಯ
ಭಾರತೀಯ ಟೆಲಿಕಾಂ ವಲಯದಲ್ಲಿ Reliance Jio ಕಂಪನಿಯು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಜಿಯೋ ಸಂಸ್ಥೆಯು ಹಲವು ಭಿನ್ನ ಪ್ರಿಪೇಯ್ಡ್ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಜಿಯೋ ಟೆಲಿಕಾಂನ ಬಹುತೇಕ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಹೆಚ್ಚಿನ ದೈನಂದಿನ ಡೇಟಾ ಸೌಲಭ್ಯ ಪಡೆದುಕೊಂಡಿವೆ. ಅಲ್ಲದೇ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಕೂಡಾ ಒಳಗೊಂಡಿವೆ. ಅದಾಗ್ಯೂ, ಜಿಯೋ ಟೆಲಿಕಾಂನ ಕೆಲವೊಂದು ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಡೇಟಾ ಸೌಲಭ್ಯದ ಜೊತೆಗೆ ಜನಪ್ರಿಯ OTT ಪ್ಲಾಟ್‌ಫಾರ್ಮ್‌ಗಳ ಚಂದಾದಾರಿಕೆಯ ಪ್ರಯೋಜನ ಸಹ ಹೊಂದಿವೆ. ಅಂತಹ ಪ್ರೀಪೇಯ್ಡ್ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಜಿಯೋ ಟೆಲಿಕಾಂನ 445 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಅಧಿಕ OTT ತಾಣಗಳ ಚಂದಾದಾರಿಕೆ ಒಳಗೊಂಡಿರುವ ಮೂಲಕ ಹೆಚ್ಚು ಗಮನ ಸೆಳೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 445 ರೂ.ಗಳ ಪ್ಲಾನ್ ಪ್ರಯೋಜನ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಸ್ಟೈಲಿಶ್ ಲುಕ್ ಇರುವ CMF Phone 2 Pro 5G ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ!
Jio 445 ರೂ.ಗಳ ಪ್ಲಾನ್‌ನಲ್ಲಿ OTT ಪ್ರಯೋಜನ
ಜಿಯೋ ಟೆಲಿಕಾಂ ಕಂಪನಿಯು ಭಿನ್ನ ಯೋಜನೆಗಳ ಆಯ್ಕೆ ಪರಿಚಯಿಸಿದೆ. ಅವುಗಳಲ್ಲಿ ಜಿಯೋ ಸಂಸ್ಥೆಯ 445 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸದ್ದು ಮಾಡಿದೆ. ಹೌದು, ಜಿಯೋ ಸಂಸ್ಥೆಯ ಈ ಯೋಜನೆಯು ಒಟ್ಟು 10 OTT ಪ್ಲಾಟ್‌ಫಾರ್ಮ್‌ಗಳ ಚಂದಾದಾರಿಕೆ ಪಡೆದುಕೊಂಡಿದೆ. ಈ ಮೂಲಕ ಓಟಿಟಿ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಯೋಜನೆಯಲ್ಲಿ Sony LIV, ZEE5, Lionsgate Play, Discovery+, Sun NXT, Kanchha Lannka, Planet Marathi, Chaupal, Hoichoi, FanCode, JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ. ಮೊಬೈಲ್‌ನಲ್ಲಿ ಜನಪ್ರಿಯ ಓಟಿಟಿ ಕಾರ್ಯಕ್ರಮಗಳನ್ನು ವೀಕ್ಷಿಸುವ ಗ್ರಾಹಕರಿಗೆ ಈ ಯೋಜನೆಯು ಅತ್ಯಂತ ಸೂಕ್ತ ಎನಿಸುತ್ತದೆ.

ಜಿಯೋ 445 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಬಜೆಟ್ ದರದಲ್ಲಿ ಕಾಣಿಸಿಕೊಂಡಿರುವ ಜಿಯೋ ಟೆಲಿಕಾಂನ 445 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಹೈ ಸ್ಪೀಡ್ ಡೇಟಾ ಪ್ರಯೋಜನ ದೊರೆಯುತ್ತದೆ. ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ. ಇದರೊಂದಿಗೆ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನದ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಈ ಪ್ಲಾನಿನಲ್ಲಿ ಬಳಕೆದಾರರಿಗೆ Sony LIV, ZEE5, Lionsgate Play, Discovery+, Sun NXT, Kanchha Lannka, Planet Marathi, Chaupal, Hoichoi, FanCode, JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಿರುತ್ತದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile