Jio ಟೆಲಿಕಾಂನ ಈ ಅಗ್ಗದ ಪ್ಲಾನಿನಲ್ಲಿ ಪ್ರತಿದಿನ ಡೇಟಾ ಜೊತೆಗೆ ಎಂಟರ್‌ಟೈನ್‌ಮೆಂಟ್ ಧಮಾಕಾ!

HIGHLIGHTS

ಜಿಯೋದ ಈ ಯೋಜನೆಯಲ್ಲಿ ಜನಪ್ರಿಯ ಓಟಿಟಿಗಳ ಚಂದಾದಾರಿಕೆ ಲಭ್ಯ

ಜಿಯೋದ ಈ ರೀಚಾರ್ಜ್‌ ಯೋಜನೆಗಳಲ್ಲಿ ಪ್ರತಿದಿನ 100 SMS ದೊರೆಯುತ್ತದೆ

ಪ್ರತಿದಿನ ಡೇಟಾ ಜೊತೆಗೆ ಓಟಿಟಿ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಯೋಜನೆ ಅತ್ಯುತ್ತಮ

ರಿಲಾಯನ್ಸ್‌ Jio ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಭಿನ್ನ ಪ್ರೈಸ್‌ಟ್ಯಾಗ್‌ ರೇಂಜ್‌ನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಅಧಿಕ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಲಿಸ್ಟ್‌ ಸಹ ಒಳಗೊಂಡಿದೆ. ಹಾಗೆಯೇ ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ, ಪ್ರತಿದಿನ ಡೇಟಾ ಜೊತೆಗೆ ಓಟಿಟಿ ಪ್ರಯೋಜನ ಹೊಂದಿರುವ ರೀಚಾರ್ಜ್‌ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಜಿಯೋ ಸಂಸ್ಥೆಯ 445 ರೂ.ಗಳ ಪ್ಲಾನ್‌ ಬೊಂಬಾಟ್‌ ಆಗಿದೆ. ಹಾಗಾದರೆ ರಿಲಾಯನ್ಸ್‌ ಜಿಯೋ ಟೆಲಿಕಾಂನ 445 ರೂ. ಗಳ ಯೋಜನೆ ಹಾಗೂ ಇತರೆ ಓಟಿಟಿ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Jio 445 ರೂ.ಗಳ ಯೋಜನೆಯ ಮಾಹಿತಿ

ಜಿಯೋ ಟೆಲಿಕಾಂನ 445 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಸೋನಿ ಲೈವ್‌, ಜೀ5, ಸನ್‌ನೆಕ್ಸ್ಟ್‌ ಸೇರಿದಂತೆ ಹಲವು ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.

ಇತರೆ ಜನಪ್ರಿಯ ಓಟಿಟಿ ಪ್ಲಾನ್‌ಗಳ ಮಾಹಿತಿ

ಜಿಯೋ ಟೆಲಿಕಾಂನ 500 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಲಭ್ಯವಾಗಲಿದ್ದು, ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 56GB ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಯೂಟ್ಯೂಬ್‌ ಪ್ರಿಮಿಯಂ, ಅಮೆಜಾನ್ ವಿಡಿಯೋ, ಜಿಯೋ ಹಾಸ್ಟ್‌ ಸ್ಟಾರ್, ಸೋನಿ ಲೈವ್‌, ಜೀ5, ಸನ್‌ನೆಕ್ಸ್ಟ್‌ ಸೇರಿದಂತೆ ಹಲವು ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.

ಜಿಯೋ ಟೆಲಿಕಾಂನ 175 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಒಟ್ಟಾರೇ ವ್ಯಾಲಿಡಿಟಿ ಅವಧಿಗೆ 10GB ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ ಸೋನಿ ಲೈವ್‌, ಜೀ5, ಸನ್‌ನೆಕ್ಸ್ಟ್‌ ಸೇರಿದಂತೆ ಹಲವು ಓಟಿಟಿ ಚಂದಾದಾರಿಕೆ ಸಹ ದೊರೆಯುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :