ನೀವು Jio ಗ್ರಾಹಕರೇ? ಈ ಅಗ್ಗದ ಯೋಜನೆಯಲ್ಲಿ 84 ದಿನಗಳ ವ್ಯಾಲಿಡಿಟಿ ಸಿಗುತ್ತೆ!
ಜಿಯೋದ ಈ ಯೋಜನೆಯಲ್ಲಿ ವಾಯ್ಸ್ ಕರೆಗಳ ಸೌಲಭ್ಯ ಸಿಗುತ್ತೆ
ಜಿಯೋ ಟೆಲಿಕಾಂನ 448 ರೂ.ಗಳ ಪ್ಲಾನ್‌ನಲ್ಲಿ 84 ದಿನಗಳ ವ್ಯಾಲಿಡಿಟಿ
ಜಿಯೋದ ಈ ಯೋಜನೆಯಲ್ಲಿ ಒಟ್ಟು 1000 SMS ದೊರೆಯುತ್ತವೆ
ದೇಶದ ಟೆಲಿಕಾಂ ವಲಯದಲ್ಲಿ Jio ಕಂಪನಿಯು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಹಲವು ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಪ್ಲಾನ್‌ಗಳನ್ನು ಪರಿಚಯಿಸಿರುವ ಜಿಯೋ ಆಕರ್ಷಕ ಡೇಟಾ, ಓಟಿಟಿ ಪ್ಲಾನ್‌ಗಳ ಲಿಸ್ಟ್ ಸಹ ಹೊಂದಿದೆ. ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಯೋಜನೆಗಳು ಬೇಡಿಕೆಯಲ್ಲಿ ಇವೆ. ಆ ಪೈಕಿ ಜಿಯೋ ಟೆಲಿಕಾಂನ 448 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಅಗ್ಗದ ಬೆಲೆಯ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಗ್ಗದ ದರದ ಯೋಜನೆಯು ವಾಯ್ಸ್ ಕರೆ ಸೌಲಭ್ಯ ಹೊಂದಿರುವ ಜೊತೆಗೆ 84 ದಿನಗಳ ವ್ಯಾಲಿಡಿಟಿ ಪಡೆದುಕೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 448 ರೂ.ಗಳ ಯೋಜನೆಯ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : LPG, PAN ಕಾರ್ಡ್, ಕ್ರೆಡಿಟ್ ಕಾರ್ಡ್, UPI ಬಳಕೆಯಲ್ಲಿ ನಾಳೆಯಿಂದ ಹೊಸ ನಿಯಮಗಳು!
Jio ಟೆಲಿಕಾಂನ 448 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 448 ರೂ.ಗಳ ವ್ಯಾಲ್ಯೂ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಯಾವುದೇ ಡೇಟಾ ಪ್ರಯೋಜನ ಲಭ್ಯವಿಲ್ಲ. ಆದರೆ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1000 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.

ಇತರೆ ಆಕರ್ಷಕ ಯೋಜನೆಗಳ ಮಾಹಿತಿ
ಜಿಯೋ ಟೆಲಿಕಾಂನ 1748 ರೂ.ಗಳ ವ್ಯಾಲ್ಯೂ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 336 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್ ಯೋಜನೆ ವ್ಯಾಲ್ಯೂ ಪ್ಯಾಕ್ ಆಗಿದ್ದು, ಇದರಲ್ಲಿ ಯಾವುದೇ ಡೇಟಾ ಪ್ರಯೋಜನ ಲಭ್ಯವಿಲ್ಲ. ಆದರೆ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3600 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಜಿಯೋ ಟೆಲಿಕಾಂನ 1028 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಒಟ್ಟು 168GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯವಾಗಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile