Jio 449 ರೂ.ಗಳ ಯೋಜನೆಯಲ್ಲಿ 75GB ಡೇಟಾ ಪ್ರಯೋಜನ ಜೊತೆಗೆ SMS ಸೌಲಭ್ಯ

HIGHLIGHTS

ಜಿಯೋ ಟೆಲಿಕಾಂನ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳು ಆಕರ್ಷಕ ಡೇಟಾ ಪಡೆದಿವೆ

ಜಿಯೋದ ಪೋಸ್ಟ್‌ಪೇಯ್ಡ್‌ ಯೋಜನೆಗಳು ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಹೊಂದಿವೆ

ಜಿಯೋದ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳು ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹೊಂದಿವೆ

ರಿಲಾಯನ್ಸ್‌ ಜಿಯೋ ಕಂಪನಿಯು ಟೆಲಿಕಾಂ ವಲಯದಲ್ಲಿ ಇತರೆ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆ ಕಾಯ್ದುಕೊಂಡು ಸಾಗಿದೆ. Jio ಟೆಲಿಕಾಂ ಈಗಾಗಲೇ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಹಾಗೆಯೇ ಸಂಸ್ಥೆಯ ಕೆಲವು ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳು ಹೆಚ್ಚಿನ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಜಿಯೋ ಟೆಲಿಕಾಂನ 449 ರೂ.ಗಳ ಬೆಲೆಯ ಪೋಸ್ಟ್‌ಪೇಯ್ಡ್‌ ರೀಚಾರ್ಜ್‌ ಪ್ಲಾನ್‌ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ದರದ ಯೋಜನೆಯು ಫ್ಯಾಮಿಲಿ ಯೋಜನೆ ಆಗಿರುವ ಜೊತೆಗೆ ಆಕರ್ಷಕ ಡೇಟಾ ಸೌಲಭ್ಯ ಪಡೆದುಕೊಂಡಿದೆ. ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಹಾಗಾದರೆ ಜಿಯೋ ಟೆಲಿಕಾಂನ 449 ರೂ.ಗಳ ಪೋಸ್ಟ್‌ಪೇಯ್ಡ್‌ ರೀಚಾರ್ಜ್‌ ಯೋಜನೆಯ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Also Read : ಏಪ್ರಿಲ್‌ 2 ರಂದು ಬರಲಿರುವ Redmi Note 15 SE 5G ಫೋನಿನ ಬ್ಯಾಟರಿ ಮಾಹಿತಿ ಬಹಿರಂಗ

Jio ಟೆಲಿಕಾಂನ 449 ರೂ.ಗಳ ಪೋಸ್ಟ್‌ಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ 449 ರೂಗಳ ಪೋಸ್ಟ್‌ಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ 3 ಆಡ್-ಆನ್ ಫ್ಯಾಮಿಲಿ ಸಿಮ್‌ಗಳ ಆಯ್ಕೆ ಸಿಗಲಿದೆ. ಈ ಯೋಜನೆಯಲ್ಲಿ ಒಟ್ಟು 75GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಲ್ಲದೇ ಪ್ರತಿ ಸಿಮ್‌ಗೆ ತಿಂಗಳಿಗೆ 5GB Data ಸೌಲಭ್ಯ ದೊರೆಯುತ್ತದೆ. ಅಂದಹಾಗೆ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ. ಇದರೊಂದಿಗೆ 3 ತಿಂಗಳ ಜಿಯೋಹಾಟ್‌ ಸ್ಟಾರ್ ಮೊಬೈಲ್/ಟಿವಿ ಚಂದಾದಾರಿಕೆ ಹಾಗೂ ಉಚಿತ 50GB JioAICloud ಸ್ಟೋರೇಜ್‌ ಸೌಲಭ್ಯ ಸಿಗಲಿದೆ.

ಇತರೆ ಆಕರ್ಷಕ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳು

ಜಿಯೋ ಟೆಲಿಕಾಂನ 349 ರೂಗಳ ಪೋಸ್ಟ್‌ಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 30GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅಂದಹಾಗೆ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ. ಇದರೊಂದಿಗೆ 3 ತಿಂಗಳ ಜಿಯೋಹಾಟ್‌ ಸ್ಟಾರ್ ಮೊಬೈಲ್/ಟಿವಿ ಚಂದಾದಾರಿಕೆ ಹಾಗೂ ಉಚಿತ 50GB JioAICloud ಸ್ಟೋರೇಜ್‌ ಸೌಲಭ್ಯ ಸಿಗಲಿದೆ.

ಹಾಗೆಯೇ ಜಿಯೋ ಟೆಲಿಕಾಂನ 649 ರೂಗಳ ಪೋಸ್ಟ್‌ಪೇಯ್ಡ್‌ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ. ಹಾಗೆಯೇ ಈ ಪ್ಲಾನಿನಲ್ಲಿ JioTV ಹಾಗೂ JioAICloud ಚಂದಾದಾರಿಕೆ ಸೌಲಭ್ಯ ಲಭ್ಯ. ಇದರೊಂದಿಗೆ 3 ತಿಂಗಳ ಜಿಯೋಹಾಟ್‌ ಸ್ಟಾರ್ ಮೊಬೈಲ್/ಟಿವಿ ಚಂದಾದಾರಿಕೆ ಹಾಗೂ ಉಚಿತ 50GB JioAICloud ಸ್ಟೋರೇಜ್‌ ಸೌಲಭ್ಯ ದೊರೆಯುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :