ಕಡಿಮೆ ಬೆಲೆಯಲ್ಲಿ ಲಭ್ಯವಿರುವ Jio ಟೆಲಿಕಾಂನ ಈ ಪ್ಲಾನ್ ಉತ್ತಮವೇ? ಪ್ರತಿದಿನ 2GB ಡೇಟಾ ಸೌಲಭ್ಯ
ಜಿಯೋದ 450 ರೂ.ಗಳ ಪ್ಲಾನ್ ಅಗ್ಗದ ಬೆಲೆಯಲ್ಲಿ ಉತ್ತಮ ಆಯ್ಕೆ
ಜಿಯೋ ಸಂಸ್ಥೆಯ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಆಕರ್ಷಕ ಡೇಟಾ ಸೌಲಭ್ಯ
ಜಿಯೋ ಟೆಲಿಕಾಂನ ಈ ರೀಚಾರ್ಜ್ ಪ್ಲಾನ್ನಲ್ಲಿ ಉಚಿತ ವಾಯ್ಸ್ ಕರೆ ಪ್ರಯೋಜನ
ಜನಪ್ರಿಯ Jio ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್ಟೆಲ್ ಸಂಸ್ಥೆ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಅಗ್ಗದ ದರದಲ್ಲಿ ಆಕರ್ಷಕ ಡೇಟಾ ಅಥವಾ ಉತ್ತಮ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಪ್ಲಾನ್ಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಪಟ್ಟಿಯಲ್ಲಿ 450 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ಪ್ರಮುಖವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ವಿ ಟೆಲಿಕಾಂನ 450 ರೂ.ಗಳ ಪ್ಲಾನ್ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Jio 450 ರೂ.ಗಳ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 450 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 36 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು. ಅಲ್ಲದೇ ಜಿಯೋ ಹಾಟ್ಸ್ಟಾರ್ ಹಾಗೂ ಜಿಯೋ ಓಟಿಟಿ ಆಪ್ಸ್ ಸೌಲಭ್ಯ ಸಿಗಲಿದೆ.
ಜಿಯೋ ಕಂಪನಿಯ 198 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 198 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 14 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಪ್ರಯೋಜನ ಸಹ ಲಭ್ಯ ಆಗುವುದು.
ಜಿಯೋ ಕಂಪನಿಯ 349 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 349 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಕೂಡಾ ಲಭ್ಯ. ಹಾಗೆಯೇ ಅಮೆಜಾನ್ ಪ್ರೈಮ್ ಚಂದಾದಾರಿಕೆ ಸೌಲಭ್ಯ ಸಹ ದೊರೆಯುತ್ತದೆ.
ಜಿಯೋ ಸಂಸ್ಥೆಯ 399 ರೂ.ಗಳ ಪ್ಲಾನ್
ಜಿಯೋ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2.5GB ಡೇಟಾ ಪ್ರಯೋಜನ ಸಿಗಲಿದೆ. ಇದರ ಜೊತೆಗೆ ಈ ರೀಚಾರ್ಜ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಕೆಲವು ಓಟಿಟಿ ಚಂದಾದಾರಿಕೆ ಸಹ ಲಭ್ಯ.