Digit.in

Jio 450 ರೂ.ಗಳ ಪ್ಲಾನ್‌ನಲ್ಲಿ ಏನೆಲ್ಲಾ ಲಾಭ? ರೀಚಾರ್ಜ್ ಮಾಡುವ ಮುನ್ನ ಈ ಮಾಹಿತಿ ತಿಳಿಯಿರಿ

Jio 450 ರೂ.ಗಳ ಪ್ಲಾನ್‌ನಲ್ಲಿ ಏನೆಲ್ಲಾ ಲಾಭ? ರೀಚಾರ್ಜ್ ಮಾಡುವ ಮುನ್ನ ಈ ಮಾಹಿತಿ ತಿಳಿಯಿರಿ

ಅಗ್ರಸ್ಥಾನದ ಟೆಲಿಕಾಂ ಎನಿಸಿರುವ Jio ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಯೋಜನೆಗಳ ಆಯ್ಕೆಯನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡಿದೆ. ಆ ಪೈಕಿ ಜಿಯೋ ಕಂಪನಿಯ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಕಂಪನಿಯ 450 ರೂ.ಗಳ ಪ್ಲಾನ್‌ಗಳಲ್ಲಿ ವ್ಯಾಲಿಡಿಟಿ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ಜಿಯೋ ಟೆಲಿಕಾಂನ 450 ರೂ.ಗಳ ಪ್ಲಾನ್ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Jio 450 ರೂ.ಗಳ ಯೋಜನೆ ಪ್ರಯೋಜನಗಳು

ಜಿಯೋ ಟೆಲಿಕಾಂನ 450 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇನ್ನು ಈ ರೀಚಾರ್ಜ್‌ ಯೋಜನೆಯು 36 ದಿನಗಳ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಒಟ್ಟು 1000 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್‌, CANVA PRO LITE, JioTV ಮತ್ತು JioAICloud ಚಂದಾದಾರಿಕೆ ಲಭ್ಯ.

ಜಿಯೋ ಟೆಲಿಕಾಂನ 859 ರೂ.ಗಳ ಪ್ಲಾನ ಮಾಹಿತಿ

ಜಿಯೋ ಕಂಪನಿಯ 859 ರೂ.ಗಳ ಪ್ರೀಪೇಯ್ಡ್‌ ಪ್ರೀಪೇಯ್ಡ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ ಜಿಯೋ ಹಾಟ್‌ಸ್ಟಾರ್ + ಕನ್ವಾ ಪ್ರೊ ಲೈಟ್, JioTV ಮತ್ತು JioAICloud ಚಂದಾದಾರಿಕೆ ಲಭ್ಯ.

ಜಿಯೋ ಟೆಲಿಕಾಂನ 889 ರೂ.ಗಳ ಪ್ಲಾನ ಮಾಹಿತಿ

ಜಿಯೋ ಸಂಸ್ಥೆಯ 889 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಪ್ರೀಪೇಯ್ಡ್‌ ಪ್ಲಾನಿನಲ್ಲಿ 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಇದರಲ್ಲಿ JioTV ಮತ್ತು JioAICloud ಚಂದಾದಾರಿಕೆ ಲಭ್ಯ.

Manthesh B

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile