Jio ಟೆಲಿಕಾಂನ ಈ ಕಡಿಮೆ ಬೆಲೆಯ ಪ್ಲಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಜೊತೆಗೆ 105GB ಡೇಟಾ
ಜಿಯೋ ಟೆಲಿಕಾಂನ 666 ರೂ.ಗಳ ಪ್ಲಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ ಸೌಲಭ್ಯ
ಜಿಯೋ ಟೆಲಿಕಾಂನ ಈ ಪ್ಲಾನ್ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಪಡೆದಿದೆ
ಜಿಯೋ ಟೆಲಿಕಾಂನ ಈ ಪ್ಲಾನ್ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ
ದೇಶದ ಅಗ್ರಸ್ಥಾನದ ಟೆಲಿಕಾಂ ಕಂಪನಿ ಎಂದೆನಿಸಿರುವ Jio ಭಿನ್ನ ಮಾದರಿಯ ಪ್ರೀಪೇಯ್ಡ್ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಆ ಪೈಕಿ ಜಿಯೋ ಕಂಪನಿಯ ಹಲವು ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ದೈನಂದಿನ ಡೇಟಾ ಸೌಲಭ್ಯ ಒಳಗೊಂಡಿವೆ. ಹಾಗೆಯೇ ಈ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದುಕೊಂಡಿವೆ. ಅದಾಗ್ಯೂ, ಜಿಯೋ ಸಂಸ್ಥೆಯ ಕೆಲವೊಂದು ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಡೈಲಿ ಡೇಟಾ ಸೌಲಭ್ಯದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಅದೇ ರೀತಿ ಜಿಯೋ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ ಬಿಗ್ ವ್ಯಾಲಿಡಿಟಿ ಸಹ ಪಡೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 666 ರೂ.ಗಳ ಪ್ಲಾನ್ ಪ್ರಯೋಜನ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಭಾರತದಲ್ಲಿ Lava Bold 2 5G ಮೊಬೈಲ್ ಬಿಡುಗಡೆ! ಆರಂಭಿಕ ಬೆಲೆ 12,999 ರೂಗಳು
Jio 666 ರೂ.ಗಳ ಪ್ಲ್ಯಾನ್‌ನಲ್ಲಿ 70 ದಿನಗಳ ವ್ಯಾಲಿಡಿಟಿ
ಜಿಯೋ ಟೆಲಿಕಾಂ ಕಂಪನಿಯು ಭಿನ್ನ ಯೋಜನೆಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಅವುಗಳಲ್ಲಿ ಜಿಯೋ ಕಂಪನಿಯ 666 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರ ಗಮನ ಸೆಳೆದಿದೆ. ಹೌದು, ಜಿಯೋ ಟೆಲಿಕಾಂನ ಈ ಬಜೆಟ್ ಯೋಜನೆಯ ಪ್ರಮುಖ ಹೈಲೈಟ್ ಎಂದರೆ ಇದು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿರುವುದು. ಹಾಗೆಯೇ ಈ ಪ್ರೀಪೇಯ್ಡ್ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.

ಈ ಯೋಜನೆಯ ಇತರೆ ಪ್ರಮುಖ ಸೌಲಭ್ಯಗಳು
ಬಜೆಟ್ ದರದಲ್ಲಿ ಕಾಣಿಸಿಕೊಂಡಿರುವ ಜಿಯೋ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 100 SMS ಸೌಲಭ್ಯ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ದೊರೆಯುತ್ತದೆ. ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 105GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಸಿಗುತ್ತದೆ. ಇದರೊಂದಿಗೆ ಈ ರೀಚಾರ್ಜ್ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.
ಅದೇ ರೀತಿ ಜಿಯೋ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ದೀರ್ಘ ಅವಧಿಯ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಒಟ್ಟು 84 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ. ಇದರೊಂದಿಗೆ ಈ ಪ್ಲಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 100 SMS ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಸಿಗುತ್ತದೆ. ಅದೇ ರೀತಿ ಈ ಪ್ರೀಪೇಯ್ಡ್ ಯೋಜನೆಯಲ್ಲಿಯೂ ಸಹ JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile