jio unlimited calling
ದೇಶದ ಅಗ್ರಸ್ಥಾನದ ಟೆಲಿಕಾಂ ಕಂಪನಿ ಎಂದೆನಿಸಿರುವ Jio ಭಿನ್ನ ಮಾದರಿಯ ಪ್ರೀಪೇಯ್ಡ್ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿದೆ. ಆ ಪೈಕಿ ಜಿಯೋ ಕಂಪನಿಯ ಹಲವು ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳು ಅಧಿಕ ದೈನಂದಿನ ಡೇಟಾ ಸೌಲಭ್ಯ ಒಳಗೊಂಡಿವೆ. ಹಾಗೆಯೇ ಈ ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದುಕೊಂಡಿವೆ. ಅದಾಗ್ಯೂ, ಜಿಯೋ ಸಂಸ್ಥೆಯ ಕೆಲವೊಂದು ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಡೈಲಿ ಡೇಟಾ ಸೌಲಭ್ಯದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಅದೇ ರೀತಿ ಜಿಯೋ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್ ಬಿಗ್ ವ್ಯಾಲಿಡಿಟಿ ಸಹ ಪಡೆದಿದೆ. ಹಾಗಾದರೆ ಜಿಯೋ ಟೆಲಿಕಾಂನ 666 ರೂ.ಗಳ ಪ್ಲಾನ್ ಪ್ರಯೋಜನ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರತದಲ್ಲಿ Lava Bold 2 5G ಮೊಬೈಲ್ ಬಿಡುಗಡೆ! ಆರಂಭಿಕ ಬೆಲೆ 12,999 ರೂಗಳು
ಜಿಯೋ ಟೆಲಿಕಾಂ ಕಂಪನಿಯು ಭಿನ್ನ ಯೋಜನೆಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಅವುಗಳಲ್ಲಿ ಜಿಯೋ ಕಂಪನಿಯ 666 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರ ಗಮನ ಸೆಳೆದಿದೆ. ಹೌದು, ಜಿಯೋ ಟೆಲಿಕಾಂನ ಈ ಬಜೆಟ್ ಯೋಜನೆಯ ಪ್ರಮುಖ ಹೈಲೈಟ್ ಎಂದರೆ ಇದು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿರುವುದು. ಹಾಗೆಯೇ ಈ ಪ್ರೀಪೇಯ್ಡ್ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.
ಬಜೆಟ್ ದರದಲ್ಲಿ ಕಾಣಿಸಿಕೊಂಡಿರುವ ಜಿಯೋ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 100 SMS ಸೌಲಭ್ಯ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ದೊರೆಯುತ್ತದೆ. ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 105GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಸಿಗುತ್ತದೆ. ಇದರೊಂದಿಗೆ ಈ ರೀಚಾರ್ಜ್ ಯೋಜನೆಯಲ್ಲಿ JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.
ಅದೇ ರೀತಿ ಜಿಯೋ ಟೆಲಿಕಾಂನ 579 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ದೀರ್ಘ ಅವಧಿಯ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಒಟ್ಟು 84 GB ಡೇಟಾ ಪ್ರಯೋಜನ ಲಭ್ಯವಾಗುತ್ತದೆ. ಇದರೊಂದಿಗೆ ಈ ಪ್ಲಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಯಲ್ಲಿ ಬಳಕೆದಾರರಿಗೆ ಪ್ರತಿದಿನ 100 SMS ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಬಳಕೆದಾರರಿಗೆ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಸಿಗುತ್ತದೆ. ಅದೇ ರೀತಿ ಈ ಪ್ರೀಪೇಯ್ಡ್ ಯೋಜನೆಯಲ್ಲಿಯೂ ಸಹ JioTV ಹಾಗೂ JioAICloud ಚಂದಾದಾರಿಕೆ ಪ್ರಯೋಜನ ಗ್ರಾಹಕರಿಗೆ ಲಭ್ಯವಿರುತ್ತದೆ.