Jio ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ನೀವು ಬೇಡ ಅಂದ್ರೂ ಸಿಗುತ್ತೆ ಉಚಿತ 20GB ಡೇಟಾ!
ರಿಲಯನ್ಸ್ ಜಿಯೋದ ಈ ಪ್ಲಾನ್‌ಗಳಲ್ಲಿ Free ಡೇಟಾ ಪ್ರಯೋಜನ ಸಿಗಲಿದೆ
ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ
ಜಿಯೋ ಟೆಲಿಕಾಂನ ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಗಳು ಲಭ್ಯ
ದೇಶದ ಟೆಲಿಕಾಂ ವಲಯದಲ್ಲಿ Jio ಸಂಸ್ಥೆಯು ನಂಬರ್ ಒನ್ ಸ್ಥಾನದಲ್ಲಿ ಕಾಣಿಸಿಕೊಂಡಿದೆ. Jio ಟೆಲಿಕಾಂ ಭಿನ್ನ ಡೇಟಾ ಪ್ರಯೋಜನದ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಅಲ್ಪಾವಧಿ ವ್ಯಾಲಿಡಿಟಿ ಪಡೆದಿದ್ದರೆ, ಮತ್ತೆ ಕೆಲವು ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿವೆ. ಹಾಗೆಯೇ ಜಿಯೋ ಟೆಲಿಕಾಂನ ಕೆಲ ಯೋಜನೆಗಳು ಹೆಚ್ಚುವರಿ ಓಟಿಟಿ ಚಂದಾದಾರಿಕೆ ಪ್ರಯೋಜನ ಪಡೆದಿದ್ದು, ಮತ್ತೆ ಕೆಲ ಪ್ಲಾನ್‌ಗಳು ಹೆಚ್ಚುವರಿ ಡೇಟಾ ಸೌಲಭ್ಯ ಒಳಗೊಂಡಿವೆ. ಅದಾಗ್ಯೂ, ದೈನಂದಿನ ಡೇಟಾ ಜೊತೆಗೆ ಹೆಚ್ಚುವರಿಯಾಗಿ ಡೇಟಾ ಸೌಲಭ್ಯ ಪಡೆದುಕೊಂಡಿರುವ ಯೋಜನೆಗಳು ಹೆಚ್ಚು ಗಮನ ಸೆಳೆಯುತ್ತವೆ. ಹಾಗಾದರೆ ಹೆಚ್ಚುವರಿ ಡೇಟಾ ಸೌಲಭ್ಯ ಒದಗಿಸುವ ಜಿಯೋ 899ರೂ ಹಾಗೂ ಜಿಯೋ 749ರೂಗಳ ಪ್ಲಾನ್‌ಗಳ ಬಗ್ಗೆ ಮುಂದೆ ನೋಡೋಣ.
SurveyAlso Read : ಇತ್ತೀಚಿಗೆ ಲಾಂಚ್ ಆಗಿರುವ Vivo T4R 5G ಸ್ಮಾರ್ಟ್‌ಫೋನ್‌ಗೆ ಭರ್ಜರಿ ಡಿಸ್ಕೌಂಟ್
Jio ಸಂಸ್ಥೆಯ 749 ರೂಗಳ ಪ್ಲಾನ್ ಮಾಹಿತಿ
ರಿಲಯನ್ಸ್ ಜಿಯೋ ಕಂಪನಿಯ 749 ರೂಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯನ್ನು ಪಡೆದುಕೊಂಡಿದೆ. ಈ ಯೋಜನೆಯು ಒಟ್ಟು 72 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2 GB + 20 GB ಪ್ರಯೋಜನ ಸಿಗಲಿದೆ. ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 164 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಈ ಯೋಜನೆಯು JioTV ಮತ್ತು JioAICloud ಚಂದಾದಾರಿಕೆ ಲಭ್ಯ. ಗ್ರಾಹಕರ ಸ್ನೇಹಿ ಬೆಲೆಯಲ್ಲಿ ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಬಯಸುವ ಬಳಕೆದಾರರಿಗೆ ಈ ಯೋಜನೆ ಸೂಕ್ತ ಎನ್ನಬಹುದು.

Jio ಸಂಸ್ಥೆಯ 899 ರೂಗಳ ಪ್ಲಾನ್ ಮಾಹಿತಿ
ರಿಲಯನ್ಸ್ ಜಿಯೋ ಕಂಪನಿಯ 899 ರೂಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯನ್ನು ಪಡೆದುಕೊಂಡಿದೆ. ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2 GB ಪ್ರಯೋಜನ ಸಿಗಲಿದೆ. ಒಟ್ಟಾರೇ ವ್ಯಾಲಿಡಿಟಿ ಅವಧಿಗೆ ಒಟ್ಟು 200 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಇದರೊಂದಿಗೆ ಈ ಯೋಜನೆಯು JioTV ಮತ್ತು JioAICloud ಚಂದಾದಾರಿಕೆ ಲಭ್ಯ. ಗ್ರಾಹಕರ ಸ್ನೇಹಿ ಬೆಲೆಯಲ್ಲಿ ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಬಯಸುವ ಬಳಕೆದಾರರಿಗೆ ಈ ಯೋಜನೆ ಸೂಕ್ತ ಎನ್ನಬಹುದು. ಜಿಯೋ ಟೆಲಿಕಾಂನ ಈ ಎರಡು ರೀಚಾರ್ಜ್ ಯೋಜನೆಗಳು ಆಕರ್ಷಕ ಡೇಟಾ, ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿವೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile