Jio ಟೆಲಿಕಾಂನ 798 ರೂ.ಗಳ ಪ್ಲಾನ್‌ನಲ್ಲಿ ಬಿಗ್ ವ್ಯಾಲಿಡಿಟಿ ಜೊತೆಗೆ 40GB ಡೇಟಾ ಸೌಲಭ್ಯ

HIGHLIGHTS

ಜಿಯೋ ಸಂಸ್ಥೆಯ ಈ ಯೋಜನೆಯಲ್ಲಿ 40GB ಡೇಟಾ ಸೌಲಭ್ಯ

ಜಿಯೋ ಕಂಪನಿಯ ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ

ಜಿಯೋ ಟೆಲಿಕಾಂನ ಈ ಯೋಜನೆಗಳಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ

ಅತ್ಯುತ್ತಮ ರೀಚಾರ್ಜ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ರಿಲಾಯನ್ಸ್‌ Jio ಟೆಲಿಕಾಂ ತನ್ನದೇ ಗ್ರಾಹಕ ಬಳಗವನ್ನು ಪಡೆದಿದೆ. ಈ ಸಂಸ್ಥೆಯು ಆಕರ್ಷಕ ಪ್ಲಾನ್‌ಗಳ ಈ ಮೂಲಕ ವಿ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ಜಿಯೋ ಟೆಲಿಕಾಂ ಕಂಪನಿಯ ಬಿಗ್ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಪ್ರಯೋಜನದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯ ಪಡೆದುಕೊಂಡಿರುವ ಯೋಜನೆಗಳು ಹೆಚ್ಚು ಮುನ್ನಲೆಯಲ್ಲಿ ಇವೆ. ಹಾಗಾದರೆ ಜಿಯೋ ಟೆಲಿಕಾಂನ ಬಜೆಟ್‌ ದರದಲ್ಲಿ ನಿತ್ಯ ಅಧಿಕ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಪ್ರಯೋಜನ ನೀಡುವ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 80W ಫಾಸ್ಟ್‌ ಚಾರ್ಜಿಂಗ್ ಇರುವ Oppo K13 Turbo 5G ಮೊಬೈಲ್‌ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!

Jio ಸಂಸ್ಥೆಯ 798 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಕಂಪನಿಯ 798 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 40 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 1GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಕ್ತ ಎನ್ನಬಹುದು.

ಜಿಯೋ ಟೆಲಿಕಾಂನ 899 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಕಂಪನಿಯ 899 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB ಡೇಟಾ + (20GB) ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಬೆಸ್ಟ್‌ ಎನ್ನಬಹುದು.

ಜಿಯೋ ಟೆಲಿಕಾಂನ 999 ರೂ.ಗಳ ಪ್ಲಾನ್ ಮಾಹಿತಿ

ಜಿಯೋ ಕಂಪನಿಯ 999 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 98 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಬಯಸುವ ಬಳಕೆದಾರರು ಈ ಪ್ಲಾನ್‌ ಸೂಕ್ತ ಎನ್ನಬಹುದು.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :